ಸೋಮವಾರ, ಜೂನ್ 21, 2021
29 °C

ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಗುಣಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಕೋವಿಡ್‌ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಮಠಕ್ಕೆ ಮರಳಿದ್ದಾರೆ.‌

14 ದಿನ ಹೋಂ ಕ್ವಾರಂಟೈನ್‌ನಲ್ಲಿರಲು ವೈದ್ಯರು ಸಲಹೆ ನೀಡಿರುವ ಹಿನ್ನೆಲೆಯಲ್ಲಿ ಶ್ರೀಗಳು ಉಡುಪಿಯ ದೊಡ್ಡಣಗುಡ್ಡೆಯ ಪಾಡಿಗಾರದ ಪುತ್ತಿಗೆ ಮಠದಲ್ಲಿ ಏಕಾಂತವಾಗಿದ್ದು, ದೇವರ ಪೂಜೆ, ಪ್ರಾರ್ಥನೆಯಲ್ಲಿ ತೊಡಗಿದ್ದಾರೆ ಎಂದು ಮಠದ ಆಪ್ತರು ತಿಳಿಸಿದ್ದಾರೆ.

ಈಚೆಗೆ ಬೆಂಗಳೂರಿನಿಂದ ಹಿಂದಿರುಗಿದ ಬಳಿಕ ಶ್ರೀಗಳಿಗೆ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿತ್ತು. ಜುಲೈ 21ರಂದು ಸೋಂಕು ದೃಢಪಟ್ಟಿತ್ತು. ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಶ್ರೀಗಳು ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಶ್ರೀಗಳು ಗುಣಮುಖರಾಗಿದ್ದು, ಭಕ್ತರಲ್ಲಿ ಸಂತಸ ಮೂಡಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.