ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನುಸುಳಿ ಬಂದವನನ್ನು ಕ್ವಾರಂಟೈನ್‌ಗೆ ಕಳುಹಿಸಿದ ಮನೆಮಂದಿ

Last Updated 20 ಮೇ 2020, 13:48 IST
ಅಕ್ಷರ ಗಾತ್ರ

ಬೈಂದೂರು: ಚೆಕ್‌ಪೋಸ್ಟ್‌ಗಳಲ್ಲಿ ಅಧಿಕಾರಿಗಳ ಕಣ್ತಪ್ಪಿಸಿ ಮಹಾರಾಷ್ಟ್ರದಿಂದ ಬಂದು ಮನೆ ಸೇರಲು ಯತ್ನಿಸಿದ ಮರವಂತೆ ಸಮೀಪದ ನಡುಬೆಟ್ಟು ಎಂಬಲ್ಲಿನ ಯುವಕನನ್ನು ಮನೆಯವರು ಮತ್ತು ನೆರೆಹೊರೆಯವರು ಸೇರಿ ಕ್ವಾರಂಟೈನ್‌ಗೆ ಕಳುಹಿಸುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.

ಮಹಾರಾಷ್ಟ್ರದ ನಾಸಿಕ್‌ದಲ್ಲಿ ವೃತ್ತಿಯಲ್ಲಿತ್ತಿದ್ದ ಯುವಕ ವಾಹನಗಳನ್ನು ಬದಲಿಸುತ್ತ ಜಿಲ್ಲೆಯ ಉತ್ತರ ಗಡಿಯ ಶಿರೂರು ಚೆಕ್‌ಪೋಸ್ಟ್‌ಗಿಂತ ಹಿಂದೆಯೇ ಇಳಿದುಕೊಂಡಿದ್ದಾನೆ. ಸ್ನೇಹಿತನಿಗೆ ಕರೆಮಾಡಿ ಬೈಕ್ ತರಿಸಿಕೊಂಡು ಚೆಕ್‌ಪೋಸ್ಟ್‌ನ ತಪಾಸಣೆಗೆ ಒಳಗಾಗದೆ ಅವನ ಜತೆ ಮನೆಗೆ ಬಂದಿದ್ದಾನೆ.

‘ಹೊರರಾಜ್ಯದಿಂದ ಬಂದರೆ ನೇರವಾಗಿ ಮನೆಗೆ ಸೇರಲು ಅವಕಾಶ ಇಲ್ಲ ಎನ್ನುವುದನ್ನು ಅರಿತಿರುವ ಮನೆಯವರು ಮತ್ತು ಅಕ್ಕಪಕ್ಕದವರು ಅವನನ್ನು ಮನೆಗೆ ಸೇರಿಸಿಕೊಳ್ಳಲಿಲ್ಲ. ಅವನು ಹಾಗೆ ಬಂದಿರುವ ವಿಷಯವನ್ನು ಅವರು ಗ್ರಾಮ ಪಂಚಾಯಿತಿ ಆಡಳಿತದ ಗಮನಕ್ಕೆ ತಂದರು. ಅವರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಿಗೆ ತಿಳಿಸಿದರು. ವೈದ್ಯರು ಅವನನ್ನು ಕುಂದಾಪುರದಲ್ಲಿ ಪ್ರಾಥಮಿಕ ಪರೀಕ್ಷೆ ನಡೆಸಿ, ಕ್ವಾರಂಟೈನ್ ಕೇಂದ್ರಕ್ಕೆ ಕಳುಹಿಸಿದರು’ ಎಂದು ತಿಳಿದುಬಂದಿದೆ.

ಕೊರೊನಾ ಹರಡುವಿಕೆಯ ಅಪಾಯ ಮತ್ತು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಗ್ರಾಮೀಣ ಜನರು ಅರಿತುಕೊಂಡಿದ್ದಾರೆ ಎನ್ನುವುದಕ್ಕೆ ಮರವಂತೆಯಲ್ಲಿ ಬುಧವಾರ ನಡೆದ ಒಂದು ಘಟನೆ ಸಾಕ್ಷಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT