ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ವಾರಂಟೈನ್ ಉಲ್ಲಂಘನೆ: ಸೋಂಕಿತನ ವಿರುದ್ದ ಪ್ರಕರಣ

Last Updated 5 ಏಪ್ರಿಲ್ 2020, 15:04 IST
ಅಕ್ಷರ ಗಾತ್ರ

ಉಡುಪಿ: ಹೋಂ ಕ್ವಾರಟೈಂನ್ ನಿಯಮಗಳನ್ನು ಉಲ್ಲಂಘಿಸಿ ಸಾರ್ವಜನಿಕವಾಗಿ ಓಡಾಡಿದ ಕಾಪು ತಾಲ್ಲೂಕಿನ ಕೋವಿಡ್‌ ಸೋಂಕಿತನ ವಿರುದ್ಧ ಪ್ರಕರಣ ದಾಖಲಾಗಿದೆ.

ಆರೋಪಿಯು ಈಚೆಗೆ ದುಬೈನಿಂದ ಉಡುಪಿಗೆ ಮರಳಿದ ಬಳಿಕ 14 ದಿನಗಳ ಹೋಂ ಕ್ವಾರಂಟೈನ್‌ನಲ್ಲಿರದೆ ಸಾರ್ವಜನಿಕವಾಗಿ ಓಡಾಡಿದ್ದಾನೆ. ಕ್ವಾರಂಟೈನ್‌ ನಿಯಮಗಳನ್ನು ಹಲವು ಬಾರಿ ಉಲ್ಲಂಘಿಸಿದ್ದಾನೆ ಎಂದು ಡಿಎಚ್‌ಒ ಸುಧೀರ್ ಚಂದ್ರ ನೀಡಿದ ದೂರಿನ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಆರೋಪಿಗೆ ಸೋಂಕು ದೃಢಪಟ್ಟ ಬಳಿಕ ಆತನೊಂದಿಗೆ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದವರನ್ನು ಗುರುತಿಸಿ ಹೋಂ ಕ್ವಾರಂಟೈನ್‌ ಮಾಡಲಾಗಿದೆ ಎಂದು ಡಿಎಚ್‌ಒ ದೂರಿನಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT