ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ತ್ವರಿತಗತಿಯಲ್ಲಿ ನ್ಯಾಯದಾನ ಅಗತ್ಯ’

Last Updated 1 ಅಕ್ಟೋಬರ್ 2022, 16:04 IST
ಅಕ್ಷರ ಗಾತ್ರ

ಉಡುಪಿ: ಸಾರ್ವಜನಿಕರಿಗೆ ತ್ವರಿತಗತಿಯಲ್ಲಿ ನ್ಯಾಯ ಸಿಗುವಂತಾಗಲು ನ್ಯಾಯಾಂಗ ವ್ಯವಸ್ಥೆ ಮತ್ತಷ್ಟು ಚುರುಕಾಗಿ ಕಾರ್ಯ ನಿರ್ವಹಿಸಬೇಕಾದ ಅಗತ್ಯವಿದೆ ಎಂದು ಹೈಕೋರ್ಟ್‌ ನ್ಯಾಯಮೂರ್ತಿ ಸಿ.ಎಂ.ಜೋಷಿ ಅಭಿಪ್ರಾಯಪಟ್ಟರು.

ಶನಿವಾರ ಉಡುಪಿ ಜಿಲ್ಲಾ ವಕೀಲರ ಸಂಘದಿಂದ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ಮೀಕರಿಸಿ ಮಾತನಾಡಿ, ತ್ವರಿತ ಗತಿಯ ನ್ಯಾಯದಾನದ ಜತೆಗೆ ಕಡತಗಳ ವಿಲೇವಾರಿಗೂ ವೇಗ ಸಿಗಬೇಕಿದೆ. ಜನಸಾಮಾನ್ಯರು ಸೇವೆಗಳನ್ನು ಪಡೆಯಲು ನ್ಯಾಯಾಲಯ, ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದು ತಪ್ಪಬೇಕಾದರೆ ತ್ವರಿತ ನ್ಯಾಯದಾನ ಅಗತ್ಯ ಎಂದರು.

ಕಾರ್ಯಕ್ರಮದಲ್ಲಿ ನ್ಯಾಯಮೂರ್ತಿ ಜಿ.ಟಿ.ಶಿವಶಂಕರೇಗೌಡ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ಹಾಗೂ ಸೆಷನ್ಸ್ ನ್ಯಾಯಾಧೀಶರಾದ ಶಾಂತವೀರ ಶಿವಪ್ಪ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗಡೆ, ರಾಜ್ಯ ವಕೀಲರ ಪರಿಷತ್ ಸದಸ್ಯ ಪಿ.ಪಿ.ಹೆಗ್ಡೆ, ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ಸೋಮನಾಥ ಹೆಗ್ಡೆ, ಕಾರ್ಕಳ ವಕೀಲರ ಸಂಘದ ಅಧ್ಯಕ್ಷ ಸುನಿಲ್ ಕೆ.ಶೆಟ್ಟಿ, ಅಸಾದುಲ್ಲಾ, ಶೈಲಜಾ ಜೋಷಿ, ವೇದಾವತಿ ಅವರು ಇದ್ದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಬಿ.ನಾಗರಾಜ ಶೆಟ್ಟಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ರೊನಾಲ್ಡ್ ಪ್ರವೀಣ್, ಮಹಮ್ಮದ್ ಸುಹಾನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT