ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂರು ದಿನ ಭಾರಿ ಮಳೆ: ಮುನ್ಸೂಚನೆ

Last Updated 29 ಮೇ 2020, 16:07 IST
ಅಕ್ಷರ ಗಾತ್ರ

ಉಡುಪಿ: ಕರಾವಳಿ ಭಾಗದಲ್ಲಿ ಮೇ31 ರಿಂದ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರಸ್ತುತ ಉಡುಪಿ ಜಿಲ್ಲೆಯಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದ್ದು, 6.5 ಸೆಂ.ಮೀ.ನಿಂದ 11.5 ಸೆಂ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿದೆ.

ಸಾರ್ವಜನಿಕರು ನದಿ ಹಾಗೂ ಸಮುದ್ರಕ್ಕೆ ಇಳಿಯಬಾರದು, ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ, ಮರಗಳ ಕೆಳಗೆ ನಿಲ್ಲಬಾರದು. ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ:1077, ದೂರವಾಣಿ: 0820-2574802 ಸಂಪರ್ಕಿಸಬಹುದು. ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಇರಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT