ಹೆಬ್ರಿ: ತಾಲ್ಲೂಕಿನಾದ್ಯಂತ ಮಂಗಳವಾರ ಭಾರಿ ಮಳೆಯಾಗಿದೆ. ಸೋಮವಾರ ರಾತ್ರಿಯಿಂದಲೇ ಆರಂಭವಾದ ಮಳೆ ನಿರಂತರವಾಗಿ ಸುರಿಯಿತು.

ಚರಂಡಿ ದುರಸ್ತಿ ಮಾಡದ ಕಾರಣ ವಿವಿಧ ಕಡೆ ರಸ್ತೆಯಲ್ಲಿ ನೀರು ಹರಿದು ಸಂಚಾರಕ್ಕೆ ತೊಂದರೆಯಾಯಿತು. ವಿನೂ ನಗರ, ಕಾಲೇಜು ರಸ್ತೆಯಲ್ಲಿ ಕೆಸರು ನೀರು ತುಂಬಿ ಓಡಾಡಲು ಸಾಧ್ಯವಾಗದ ಪರಿಸ್ಥಿತಿ ಉಂಟಾಯಿತು. ವಿನೂ ನಗರ ರಸ್ತೆಯಲ್ಲಿ ಹಲವು ವಾಹನಗಳು ನಿತ್ಯವೂ ಸಂಚರಿಸುತ್ತವೆ. ರಸ್ತೆಯಲ್ಲಿ ಡಾಂಬಾರು ಇಲ್ಲದೆ ಅಪಾಯಕಾರಿ ಹೊಂಡಗಳಿದ್ದು ಬೈಕ್ ಸವಾರರು ಸಂಚರಿಸುವುದು ಅಪಾಯಕಾರಿಯಾಗಿದೆ.

ಹೆಬ್ರಿಯ ಪ್ರಮುಖ ರಸ್ತೆಯಲ್ಲಿ ಸಮರ್ಪಕ ಚರಂಡಿ ಇಲ್ಲದಿರುವುದರಿಂದ, ಮಳೆನೀರು ರಸ್ತೆಯಲ್ಲಿ ಹರಿದು ಸಂಚಾರಕ್ಕೆ ತೊಡಕಾಗಿದೆ. ಸಂಬಂಧಪಟ್ಟವರ ಸೂಕ್ತ ಕ್ರಮ ವಹಿಸಬೇಕು ಎಂದು ಸಾಮಾಜಿಕ ಹೋರಾಟಗಾರ ಕುಚ್ಚೂರು ಶ್ರೀಕಾಂತ ಪೂಜಾರಿ ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.