ಸೋಮವಾರ, ಜನವರಿ 25, 2021
26 °C

ವರುಣನ ಅಬ್ಬರ: ಗುಡುಗಿ ಸಿಡಿಲಿನ ಅಬ್ಬರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಕಾರ್ಕಳ, ಕುಂದಾಪುರ, ಹೆಬ್ರಿ, ಬ್ರಹ್ಮಾವರ ಉಡುಪಿ ಸೇರಿದಂತೆ ಜಿಲ್ಲೆಯಾದ್ಯಂತ ಬುಧವಾರ ಗುಡುಗು ಸಿಡಿಲು ಸಹಿತ ಭಾರಿ ಮಳೆ ಸುರಿಯಿತು. ಸಂಜೆಯ ಹೊತ್ತಿಗೆ ಆರಂಭವಾದ ಮಳೆ 3 ತಾಸಿಗೂ ಹೆಚ್ಚು ಕಾಲ ನಿರಂತರವಾಗಿ ಸುರಿಯಿತು.

ಗುಡುಗು ಸಿಡಿಲು ಮಳೆಯ ಆರ್ಭಟಕ್ಕೆ ರಸ್ತೆಗಳೆಲ್ಲ ಮಳೆಯ ನೀರಿನಿಂದ ಜಲಾವೃತಗೊಂಡವು. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನಕ್ಕೆ ತೊಂದರೆಯಾಯಿತು. ವಿದ್ಯುತ್ ವ್ಯತ್ಯಯದಿಂದ ಹಲವು ಬಡಾವಣೆಗಳು ಕತ್ತಲಲ್ಲಿ ಮುಳುಗಿದ್ದವು.‌ ಬೇಸಿಗೆಯ ಬಿಸಿಲಿಗೆ ಒಣಗಿದ್ದ ತೋಡುಗಳು ಮಳೆಯ ನೀರಿನಿಂದ ತುಂಬಿ ತುಳುಕಿದವು. ಚರಂಡಿ ಉಕ್ಕಿ ಹರಿದು ಹಲವು ಕಡೆ ಅವ್ಯವಸ್ಥೆ ನಿರ್ಮಾಣವಾಗಿತ್ತು.

ಮಳೆ ಮುನ್ಸೂಚನೆ: ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಧ್ಯಾಹ್ನ ಮುನ್ಸೂಚನೆ ನೀಡಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು