ಭಾನುವಾರ, ಆಗಸ್ಟ್ 1, 2021
20 °C

ಉಡುಪಿ: ಮುಂದುವರಿದ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಜಿಲ್ಲೆಯಾದ್ಯಂತ ಭಾನುವಾರವೂ ಬಿರುಸಿನ ಮಳೆ ಸುರಿಯಿತು. ಉಡುಪಿ ತಾಲ್ಲೂಕಿನ ಶಿವಳ್ಳಿ, ಕಾಪು ತಾಲ್ಲೂಕಿನ ಪಡು, ಪಲಿಮಾರು, ಕಾರ್ಕಳ ತಾಲ್ಲೂಕಿನ ನಿಟ್ಟೆ, ಹೆಬ್ರಿ ತಾಲ್ಲೂಕಿನಲ್ಲಿ ಹಲವು ಮನೆಗಳಿಗೆ ಹಾನಿಯಾಗಿದೆ.

ಕಾಪು ತಾಲ್ಲೂಕಿನಲ್ಲಿ ಸಿಡಿಲು ಬಡಿದು ಹಲವು ಮನೆಗಳಿಗೆ ಹಾನಿಯಾಗಿದೆ. ವಿದ್ಯುತ್ ಸಂಪರ್ಕ ಸುಟ್ಟುಹೋಗಿದೆ. ‌ಕುಂಜೂರು ಶ್ರೀ ದುರ್ಗಾ ದೇವಸ್ಥಾನದ ಮುಂಭಾಗ ಜಲಾವೃತಗೊಂಡಿದೆ.  ಬೆಳಪು, ಅದಮಾರು, ಎರ್ಮಾಳು, ಮಜೂರು, ಕುತ್ಯಾರು, ಇನ್ನಂಜೆಯಲ್ಲಿ ನೆರೆಭೀತಿ ಸೃಷ್ಟಿಯಾಗಿದೆ.

24 ಗಂಟೆಗಳಲ್ಲಿ 9.1 ಸೆಂ.ಮೀ ಮಳೆಯಾಗಿದೆ. ಜಿಲ್ಲೆಯಾದ್ಯಂತ ಗಾಳಿ ಮಳೆಗೆ ವಿದ್ಯುತ್ ಕಂಬಗಳು ಮುರಿದು ಬುದ್ದಿವೆ. ಮರಗಳು ಧರೆಗುರುಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು