ಗುರುವಾರ , ಆಗಸ್ಟ್ 11, 2022
27 °C
ಪಂಚವರ್ಣ ಪ್ರಾಥಮಿಕ ಶಾಲೆ ಪರಿಸರ ಮಾಹಿತಿ ಕಾರ್ಯಾಗಾರ ಮಾಲಿಕೆಯಲ್ಲಿ ಜಗದೀಶ ನಾವುಡ

ಉಡುಪಿ | ಪರಿಸರ ಜಾಗೃತಿ ಮೂಡಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಟ (ಬ್ರಹ್ಮಾವರ): ಭೂಮಿತಾಯಿಯನ್ನು ಆರಾಧಿಸಿದರೆ ಪರಿಸರ ಜಾಗೃತಿ ತನ್ನಿಂದ ತಾನೆ ವೃದ್ಧಿಯಾಗುತ್ತದೆ ಎಂದು ಕೋಟ ವಿವೇಕ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಕೆ. ಜಗದೀಶ ನಾವಡ ಹೇಳಿದರು.

ಕೋಟ ಗಿಳಿಯಾರು ಶಾಂಭವೀ ವಿದ್ಯಾದಾಯಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗಿಳಿಯಾರು ಯುವಕ ಮಂಡಲ, ಕಾರ್ಕಡ ಗೆಳೆಯರ ಬಳಗ, ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ, ಕೋಟ ಸಾಲಿಗ್ರಾಮ ರೋಟರಿ ಕ್ಲಬ್, ಮಣೂರು ಗೀತಾನಂದ ಫೌಂಡೇಶನ್ ಸಹಯೋಗದೊಂದಿಗೆ ಸ್ಥಳೀಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಪರಿಸರ ಮಾಹಿತಿ ಕಾರ್ಯಾಗಾರ ಮಾಲಿಕೆ 2 ಅನ್ನು ಉದ್ಘಾಟಿಸಿ ಮಾತನಾಡಿದರು.

ಮಕ್ಕಳಿಗೆ ಪ್ರಾಥಮಿಕ ಹಂತದಲ್ಲೇ ಪರಿಸರದ ಬಗ್ಗೆ ಜಾಗೃತಿ ಮೂಡಿಸಿದರೆ ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಾಣ ಮಾಡಲು ಸಾಧ್ಯ. ಪ್ರತಿ ಮನೆಯಲ್ಲಿ ಮಕ್ಕಳು ಅದನ್ನು ಅನುಸರಿಸಿದರೆ ಹಿರಿಯರಿಗೂ ಅದರ ಬಗ್ಗೆ ಅರಿವು ಮೂಡುತ್ತದೆ. ಆಗ ಮಾತ್ರ ಯಶಸ್ಸು ಲಭಿಸುತ್ತದೆ ಎಂದರು.

ಸಂಪನ್ಮೂಲ ವ್ಯಕ್ತಿ ಅರುಣ್ ಕುಮಾರ್ ಶಿರೂರು ‘ಪ್ರತಿಯೊಬ್ಬರಲ್ಲೂ ಪರಿಸರ ಪ್ರಜ್ಞೆ ಅಗತ್ಯ. ಮಕ್ಕಳು ನವ ನವೀನ ತಿನಿಸುಗಳಿಗೆ ಮಾರುಹೋಗಿ ತಮ್ಮ ಆರೋಗ್ಯವನ್ನು ಹಾಳು ಮಾಡಿಕೊಳ್ಳುವುದಲ್ಲದೇ, ತಿಂಡಿ ತಿನಿಸುಗಳನ್ನು ತಿಂದ ಬಳಿಕ ಪ್ಲಾಸ್ಟಿಕ್‌ ಅನ್ನು ಎಲ್ಲೆಂದರಲ್ಲಿ ಎಸೆಯುವ ಮನಃಸ್ಥಿತಿಯನ್ನು ಬದಲಾಯಿಸುವ ಪ್ರಯತ್ನವಾಗಬೇಕು ಎಂದು ಹೇಳಿದರು.

ಶಾಂಭವೀ ವಿದ್ಯಾದಾಯಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ದಿವಾಕರ್ ರಾವ್ ಅಧ್ಯಕ್ಷತೆ ವಹಿಸಿದ್ದರು. ಜ್ಯೋತಿ ಉದಯ ಕುಮಾರ್, ಕಾರ್ಕಡ ಗೆಳೆಯರ ಬಳಗದ ಅಧ್ಯಕ್ಷ ಕೆ. ತಾರಾನಾಥ ಹೊಳ್ಳ, ಪಂಚವರ್ಣ ಯುವಕ ಮಂಡಲದ ಗೌರವಾಧ್ಯಕ್ಷ ಸತೀಶ್ ಎಚ್. ಕುಂದರ್, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಮೃತ್ ಜೋಗಿ, ಮಹಿಳಾ ಮಂಡಲದ ಕಾರ್ಯದರ್ಶಿ ಲಲಿತಾ ಪೂಜಾರಿ ಇದ್ದರು.

ಪಂಚವರ್ಣದ ಕಾರ್ಯದರ್ಶಿ ನಿತಿನ್‌ ಕುಮಾರ್ ಸ್ವಾಗತಿಸಿದರು. ಕಾರ್ಯಾಧ್ಯಕ್ಷ ರವೀಂದ್ರ ಕೋಟ ನಿರೂಪಿಸಿ ವಂದಿಸಿದರು.  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು