ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರ, ರೈತರ ಮಧ್ಯೆ ರೈತ ಮೋರ್ಚಾ ಕೊಂಡಿಯಾಗಿರಲಿ: ಈರಣ್ಣ ಕಡಾಡಿ‌ ಕರೆ

Last Updated 25 ಮೇ 2022, 15:43 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲಾ ಬಿಜೆಪಿ ರೈತ ಮೋರ್ಚಾ ಕ್ರಿಯಾಶೀಲತೆಯಿಂದ ಕಾರ್ಯ ನಿರ್ವಹಿಸುತ್ತಿದ್ದು ಪಕ್ಷದ ಕಾರ್ಯಕರ್ತರು ರೈತರು ಹಾಗೂ ಸರ್ಕಾರದ ನಡುವೆ ಕೊಂಡಿಯಾಗಿಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯರೂ ಆಗಿರುವ ಈರಣ್ಣ ಕಡಾಡಿ ಸಲಹೆ ನೀಡಿದರು.

ಬಿಜೆಪಿ ಜಿಲ್ಲಾ ರೈತ ಮೋರ್ಚಾದಿಂದ ಜಿಲ್ಲಾ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲಾ ರೈತ ಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಕಾರ್ಯಕರ್ತರು ಸರ್ಕಾರದ ಸಾಧನೆಗಳನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ಯಬೇಕು. ಪ್ರಧಾನಿ ಮೋದಿ ಆಶಯದಂತೆ ದೇಶ ಸದೃಢವಾಗಿ ಆತ್ಮನಿರ್ಭರ ಭಾರತವಾಗಬೇಕು ಎಂದರು.

ಮುಂದಿನ ಚುನಾವಣೆಗಳಲ್ಲಿ ರೈತ ಮೋರ್ಚಾ ಪದಾಧಿಕಾರಿಗಳು, ಸಮಿತಿ ಸದಸ್ಯರು ಹಾಗೂ ಕಾರ್ಯಕರ್ತರು ಜನಸೇವೆಯ ಮೂಲಕ ಪಕ್ಷ ಸಂಘಟನಾ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಕಟಿಬದ್ಧರಾಗಿ ಶ್ರಮಿಸಬೇಕು ಎಂದರು.

ರೈತ ಮೋರ್ಚಾದ ರಾಜ್ಯ ಕಾರ್ಯದರ್ಶಿ ಪ್ರಸನ್ನ ಕೆರೆಕೈ ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕರ್ತರು ತಳಮಟ್ಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ರೈತರ ಶ್ರೇಯೋಭಿವೃದ್ಧಿ ಹಾಗೂ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಬೇಕು ಎಂದರು.

ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ ಮಾತನಾಡಿ ಜಿಲ್ಲಾ ರೈತ ಮೋರ್ಚಾ ನಿಯಮಿತ ಸಭೆ ಹಾಗೂ ನಿರಂತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಮಂಡಲವಾರು ಗ್ರಾಮ ಮಟ್ಟದಲ್ಲಿ ರೈತ ಉತ್ಪಾದಕ ಸಂಘಗಳನ್ನು ರಚಿಸುವ ಕಾರ್ಯ ಪ್ರಗತಿಯಲ್ಲಿದೆ. ಸರ್ಕಾರದಿಂದ ರೈತರಿಗೆ ದೊರೆಯುವ ಸೌಲಭ್ಯಗಳನ್ನು ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಯುತ್ತಿದೆ ಎಂದರು.

ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ರಾಘವೇಂದ್ರ ಉಪ್ಪೂರು ಮಾತನಾಡಿದರು. ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ರೈತ ಮೋರ್ಚಾ ಜಿಲ್ಲಾ ಪದಾಧಿಕಾರಿಗಳು, ಸಮಿತಿ ಹಾಗೂ ಕಾರ್ಯಕಾರಿಣಿ ಸದಸ್ಯರು, ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಇದ್ದರು. ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಧೀರಜ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT