ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ ಸೌಂಡ್ಸ್ ಅಂಡ್ ಲೈಟ್ಸ್: ಜೂನ್ 5ರಂದು ಆಸ್ಟ್ರೇಲಿಯಾದಲ್ಲಿ ತೆರೆಗೆ

Last Updated 28 ಮೇ 2022, 15:31 IST
ಅಕ್ಷರ ಗಾತ್ರ

ಉಡುಪಿ: ರಾಜ್ ಸೌಂಡ್ಸ್ ಅಂಡ್ ಲೈಟ್ಸ್ ತುಳು ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು ಜೂನ್‌ 5ರಂದು ಆಸ್ಟ್ರೇಲಿಯಾದಲ್ಲಿ ಬಿಡುಗಡೆಯಾಗುತ್ತಿದೆ ಎಂದು ಚಿತ್ರದ ಸಹನಿರ್ಮಾಪಕ ಸುಹಾನ್ ಪ್ರಸಾದ್ ತಿಳಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿಯಾದ್ಯಂತ ಚಿತ್ರ ಬಿಡುಗಡೆಗೊಂಡಿದ್ದು ತುಂಬಿದ ಗೃಹಗಳ ಪ್ರದರ್ಶನ ಕಾಣುತ್ತಿದೆ. ₹ 50 ಲಕ್ಷದಷ್ಟು ಹಣ ಗಳಿಸಿದೆ. ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಂಗಳೂರು, ಶುಂಠಿಕೊಪ್ಪದಲ್ಲೂ ಚಿತ್ರ ತೆರೆಕಂಡಿದೆ ಎಂದರು.

ಶೀಘ್ರವೇ ಮುಂಬೈ, ಐರೋಪ್ಯ ದೇಶಗಳಲ್ಲಿ ಚಿತ್ರ ಬಿಡುಗಡೆ ಮಾಡುವ ಉದ್ದೇಶವಿದೆ. ಒಳ್ಳೆಯ ಚಿತ್ರಕತೆಯನ್ನಿಟ್ಟುಕೊಂಡು ಸಿನಿಮಾ ಮಾಡಿದರೆ ಜನರು ವೀಕ್ಷಿಸುತ್ತಾರೆ ಎಂಬುದಕ್ಕೆ ರಾಜ್ ಸೌಂಡ್ಸ್ ಅಂಡ್ ಲೈಟ್ಸ್ ಉತ್ತಮ ಉದಾಹರಣೆ ಎಂದರು.

ಮೇ 29ರಂದು ಜಾಥಾ:

ಚಿತ್ರ ಉತ್ತಮ ಪ್ರದರ್ಶನ ಕಾಣುತ್ತಿರುವ ಹಿನ್ನೆಲೆಯಲ್ಲಿ ಪ್ರೇಕ್ಷಕರಿಗೆ ಕೃತಜ್ಞತೆ ಸಲ್ಲಿಸಲು ಹಾಗೂ ಸಿನಿಮಾ ಪ್ರಚಾರಕ್ಕಾಗಿ ಮೇ 29ರಂದು ಮಧ್ಯಾಹ್ನ 1 ಗಂಟೆಗೆ ಉಡುಪಿಯಲ್ಲಿ ಜಾಥಾ ಹಮ್ಮಿಕೊಳ್ಳಲಾಗಿದೆ. ಉಡುಪಿಯ ಕಲ್ಪನಾ ಚಿತ್ರ ಮಂದಿರದಿಂದ ಜಾಥಾ ಆರಂಭವಾಗಲಿದೆ ಎಂದು ನಟ ಸಂದೀಪ್ ಶೆಟ್ಟಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮರ್ವಿನ್ ಶಿರ್ವ, ಅರ್ಪಿತ್ ಅಡ್ಯಾರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT