ಉಡುಪಿ: ಕುಕ್ಕೆಹಳ್ಳಿಯ ರಕ್ಷಿತಾ ನಾಯಕ್ ಸಾವಿನ ಪ್ರಕರಣದ ಆರೋಪಿ ಪ್ರಶಾಂತ್‌ಗೆ ನ್ಯಾಯಾಲಯ ಸೋಮವಾರ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ.

ಅ.30ರಂದು ಆರೋಪಿಯನ್ನು ಬಂಧಿಸಿದ್ದ ಪೊಲೀಸರು ಮೂರು ದಿನ ತೀವ್ರ ವಿಚಾರಣೆಗೊಳಪಡಿಸಿ ಸೋಮವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ಈ ವೇಳೆ ನ್ಯಾಯಾಧೀಶರು ಆರೋಪಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಯಿತು ಎಂದು ಪೊಲೀಸರು ತಿಳಿಸಿದರು.

ಮೊದಲು ಯುಡಿಆರ್, ನಂತರ ಅತ್ಯಾಚಾರ ಪ್ರಕರಣ:ಅ.25ರಂದು ರಕ್ಷಿತಾ ನಾಯಕ್ ಸಾವಿನ ಕುರಿತು ಪೋಷಕರು ನೀಡಿದ ದೂರಿನಂತೆ ಉಡುಪಿ ನಗರ ಠಾಣೆಯಲ್ಲಿ ಯುಡಿಆರ್ (ಅಸ್ವಾಭಾವಿಕ ಸಾವು) ಪ್ರಕರಣ ದಾಖಲಾಗಿತ್ತು. ಬಳಿಕ ಅ.30ರಂದು ‘ಆರೋಪಿ ಪ್ರಶಾಂತ್ ವಿವಾಹವಾಗಿರುವುದನ್ನು ಮುಚ್ಚಿಟ್ಟು, ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಇಚ್ಚೆಗೆ ವಿರುದ್ಧವಾಗಿ ಗರ್ಭಪಾತ ಮಾಡಿಸಿ, ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾನೆ’ ಎಂದು ರಕ್ಷಿತಾ ತಂದೆ ಮರು ದೂರು ನೀಡಿದ ಹಿನ್ನೆಲೆಯಲ್ಲಿ, ಆರೋಪಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿತ್ತು’ ಎಂದು ಪೊಲೀಸರು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.