ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮಮಂದಿರ 140 ಕೋಟಿ ಜನರದ್ದು: ಸಚಿವೆ ಹೆಬ್ಬಾಳಕರ

Published 17 ಜನವರಿ 2024, 11:35 IST
Last Updated 17 ಜನವರಿ 2024, 11:35 IST
ಅಕ್ಷರ ಗಾತ್ರ

ಉಡುಪಿ: ‘ಅಯೋಧ್ಯೆಯ ರಾಮಮಂದಿರ ಅವರದ್ದೂ(ಬಿಜೆಪಿ) ಅಲ್ಲ; ನಮ್ಮದೂ (ಕಾಂಗ್ರೆಸ್‌) ಅಲ್ಲ. 140 ಕೋಟಿ ಜನರಿಗೆ ಸೇರಿದ್ದು’ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ನಗರದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ‘ರಾಮಮಂದಿರ ನಿರ್ಮಾಣಕ್ಕೆ ನಾನೂ ದೇಣಿಗೆ ನೀಡಿದ್ದು ಶೀಘ್ರ ಅಯೋಧ್ಯೆಗೆ ಭೇಟಿ ನೀಡುತ್ತೇನೆ. ರಾಮಮಂದಿರ ವಿಚಾರದಲ್ಲಿ ಪಕ್ಷದ ನಡೆಯ ಬಗ್ಗೆ ಮಾತನಾಡುವುದಿಲ್ಲ. ಮಾತನಾಡಲು ಪಕ್ಷದ ಅಧ್ಯಕ್ಷೆಯೂ ಅಲ್ಲ, ನಾನು ದೇವರ ಭಕ್ತೆ ಅಷ್ಟೆ’ ಎಂದರು.

ಅನಂತಕುಮಾರ ಹೆಗಡೆಗೆ ತಿರುಗೇಟು:‌

ನಾಲ್ಕೂವರೆ ವರ್ಷಗಳಿಂದ ಸುದ್ದಿಯಲ್ಲಿ ಇರದ ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ಚುನಾವಣೆ ಸಮೀಪಿಸುತ್ತಿದ್ದಂತೆ ದಿಢೀರ್ ಮುನ್ನೆಲೆಗೆ ಬಂದಿದ್ದಾರೆ. ಕಾಂಗ್ರೆಸ್ ಹಾಗೂ ಮುಖ್ಯಮಂತ್ರಿ ಅವರನ್ನು ಟೀಕಿಸುವ ನೈತಿಕತೆ ಅವರಿಗಿಲ್ಲ ಎಂದರು.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೊಳಪಡುವ ಬೆಳಗಾವಿ ಜಿಲ್ಲೆಯ ಖಾನಾಪುರ ವಿಧಾನಸಭಾ ಕ್ಷೇತ್ರಕ್ಕೆ ಒಮ್ಮೆಯೂ ಭೇಟಿ ನೀಡಿಲ್ಲ. ಮತದಾರರ ಸಮಸ್ಯೆ ಆಲಿಸಿಲ್ಲ. ಅಭಿವೃದ್ಧಿ ಕಾರ್ಯಗಳನ್ನು ಮಾಡದ ಸಂಸದರು ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡುವಲ್ಲಿ ನಿರತರಾಗಿದ್ದಾರೆ ಎಂದು ದೂರಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT