ಗುರುವಾರ , ಸೆಪ್ಟೆಂಬರ್ 24, 2020
27 °C

ರಾಮಮಂದಿರ ಶತಮಾನಗಳ ಕನಸು:ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ರಾಮಾಯಣ, ಮಹಾಭಾರತ ಎರಡು ಸಾಹಿತ್ಯಗಳು ದೇಶದ ಸಂಸ್ಕೃತಿಯ ಮೂಲಬೇರುಗಳು. ಉದಾತ್ತವಾದ ಸನಾತನ ಸಂಸ್ಕೃತಿಯ ಕಾರಣಕ್ಕೆ ಜಗತ್ತಿನಲ್ಲಿ ಭಾರತಕ್ಕೆ ವಿಶೇಷ ಸ್ಥಾನವಿದೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು ಹೇಳಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮ ಕುರಿತು ಮಾತನಾಡಿದ ಶ್ರೀಗಳು ‘ಆದರ್ಶ ಪುರುಷ ಶ್ರೀರಾಮನ ಅವತಾರ ಭೂಮಿಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗುತ್ತಿರುವುದು ಶತಮಾನಗಳ ಕನಸು. ಅಸಂಖ್ಯ ಹಿಂದೂಗಳ ಹೋರಾಟ ಬಲಿದಾನವೂ ರಾಮಮಂದಿರ ನಿರ್ಮಾಣದ ಹಿಂದಿದೆ’ ಎಂದಿದ್ದಾರೆ.

ಅಯೋಧ್ಯೆ ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ಎಲ್ಲರೂ ಕಾಯ ವಾಚ ಮನಸ ತೊಡಗಿಸಿಕೊಳ್ಳೋಣ ಎಂದು ಶ್ರೀಗಳು ಕರೆ ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು