ಮಂಗಳವಾರ, ಮೇ 17, 2022
29 °C

ರಾಮಮಂದಿರ ನಿರ್ಮಾಣಕ್ಕೆ ₹6 ಕೋಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಕಂಚಿ ಕಾಮಕೋಟಿ ಪೀಠದಲ್ಲಿ ನಡೆದ ನಿಧಿ ಸಂಗ್ರಹ ಅಭಿಯಾನದಲ್ಲಿ ₹ 6 ಕೋಟಿ ದೇಣಿಗೆ ಸಂಗ್ರಹಿಸಲಾಯಿತು.

ಕಂಚಿ ಮಠದ ಭಕ್ತ ಹಾಗೂ ಉದ್ಯಮಿ ಮೋಹನ್ ಮಂದಿರ ನಿರ್ಮಾಣಕ್ಕೆ 5 ಕೋಟಿ ದೇಣಿಗೆ ನೀಡಿದರು. ಕಂಚಿ ಮಠದಿಂದ ಹಾಗೂ ಭಕ್ತರಿಂದ ಒಂದು ಕೋಟಿ ಸಂಗ್ರಹವಾಯಿತು. ಕಂಚಿ ವಿಜಯೇಂದ್ರ ಸರಸ್ವತಿ ಸ್ವಾಮೀಜಿಗಳು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹಾಗೂ ಅಯೋಧ್ಯೆ ಟ್ರಸ್ಟ್ ಕೋಶಾಧಿಕಾರಿ ಗೋವಿಂದಗಿರಿ ಮಹಾರಾಜ್ ಅವರಿಗೆ ಸಂಗ್ರಹವಾದ ₹ 6 ಕೋಟಿ ಹಸ್ತಾಂತರ ಮಾಡಿದರು. ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು