ಅತ್ಯಾಚಾರ ಪ್ರಕರಣ: ಆರೋಪಿಗೆ 27 ವರ್ಷ ಶಿಕ್ಷೆ

ಶುಕ್ರವಾರ, ಏಪ್ರಿಲ್ 19, 2019
27 °C

ಅತ್ಯಾಚಾರ ಪ್ರಕರಣ: ಆರೋಪಿಗೆ 27 ವರ್ಷ ಶಿಕ್ಷೆ

Published:
Updated:

ಉಡುಪಿ: ಮೂರು ವರ್ಷಗಳ ಹಿಂದೆ ಅಪ್ರಾಪ್ತ ಬುದ್ಧಿಮಾಂದ್ಯ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪಿಗೆ ಜಿಲ್ಲಾ ವಿಶೇಷ ನ್ಯಾಯಾಲಯ ಹಲವು ಪ್ರಕರಣಗಳಡಿ ಒಟ್ಟು 27 ವರ್ಷ ಶಿಕ್ಷೆ ವಿಧಿಸಿದೆ.

ಮಣಿಪಾಲ ಪೆರಂಪಳ್ಳಿಯ ಅರುಣ್‌ ಆಚಾರಿ (32) ಶಿಕ್ಷೆಗೆ ಗುರಿಯಾದ ವ್ಯಕ್ತಿ. ಬಾಲಕಿಯ ಅಪಹರಣ ಪ್ರಕರಣದಲ್ಲಿ 7 ವರ್ಷ ಜೈಲು, ₹ 30000 ದಂಡ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ 10 ವರ್ಷ ಸಜೆ ₹ 30,000 ದಂಡ, ಪೋಕ್ಸೋ ಕಾಯ್ದೆಯಡಿ 10 ವರ್ಷ ಜೈಲು ಶಿಕ್ಷೆ ₹ 50000 ದಂಡ ವಿಧಿಸಲಾಗಿದೆ. ದಂಡದ ಹಣದಲ್ಲಿ ಸಂತ್ರಸ್ತೆಗೆ ₹ 1 ಲಕ್ಷ ಪರಿಹಾರ ನೀಡುವಂತೆ ಆದೇಶಿಸಲಾಗಿದೆ.

ಅಪಹರಣ ಪ್ರಕರಣದ ಶಿಕ್ಷೆ ಹೊರತುಪಡಿಸಿ ಉಳಿದ ಪ್ರಕರಣಗಳಲ್ಲಿ ವಿಧಿಸಲಾಗಿರುವ ಶಿಕ್ಷೆಯನ್ನು ಏಕಕಾಲದಲ್ಲಿ ಅನುಭವಿಸುವಂತೆ ನ್ಯಾಯಾಲಯ ತೀರ್ಪು ನೀಡಿದೆ.

ಪ್ರಕರಣದ ವಿವರ:

2016ರ ಜುಲೈ 16ರಂದು ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ ಮದುವೆಯಾಗುವುದಾಗಿ ನಂಬಿಸಿ ಆರೋಪಿ ಅರುಣ್ ಪೂಜಾರಿ ಅತ್ಯಾಚಾರ ಎಸಗಿದ್ದ. ಈ ಸಂಬಂಧ ಬಾಲಕಿಯ ತಂದೆ ಮಣಿಪಾಲ ಠಾಣೆಗೆ ದೂರು ನೀಡಿದ್ದರು. ಪೋಕ್ಸೊ ಕಾಯ್ದೆಯಡಿ ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ್ದ ಜಿಲ್ಲಾ ವಿಶೇಷ ನ್ಯಾಯಾಲಯ ಬುಧವಾರ ಆರೋಪಿಯನ್ನು ದೋಷಿ ಎಂದು ನಿರ್ಧರಿಸಿತ್ತು. ಸರ್ಕಾರದ ಪರವಾಗಿ ಜಿಲ್ಲಾ ವಿಶೇಷ ಸರ್ಕಾರಿ ಅಭಿಯೋಜಕ ವಿಜಯವಾಸು ಪೂಜಾರಿ ವಾದ ಮಂಡಿಸಿದ್ದರು.

Tags: 

ಬರಹ ಇಷ್ಟವಾಯಿತೆ?

 • 7

  Happy
 • 1

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !