ಉಡುಪಿ: ಮೂರು ವರ್ಷಗಳ ಹಿಂದೆ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಆಕೆ ಗರ್ಭಿಣಿಯಾಗಲು ಕಾರಣನಾದ ಅಪರಾಧಿಗೆ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯದ ಪೋಕ್ಸೊ ತ್ವರಿತ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ₹ 15 ಸಾವಿರ ದಂಡ ವಿಧಿಸಿದೆ. ದಂಡ ಪಾವತಿಗೆ ವಿಫಲವಾದರೆ ಒಂದು ವರ್ಷ ಸಾದಾ ಶಿಕ್ಷೆಗೆ ಆದೇಶಿಸಿದೆ.

ಶಂಕರ್ ಎಂಬಾತ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಜೀವಾವಧಿ ಶಿಕ್ಷೆಯ ಜತೆಗೆ ಕೊಲೆ ಬೆದರಿಕೆ ಹಾಕಿದ್ದಕ್ಕೆ 3 ವರ್ಷ ಜೈಲು ಶಿಕ್ಷೆ, ₹ 5 ಸಾವಿರ ದಂಡ ಹಾಗೂ ದಂಡ ಪಾವತಿಸದಿದ್ದರೆ 6 ತಿಂಗಳು ಸಾದಾ ಶಿಕ್ಷೆ ನೀಡಿ ನ್ಯಾಯಾಧೀಶರಾದ ಎರ್ಮಾಳು ಕಲ್ಪನಾ ಆದೇಶ ನೀಡಿದ್ದಾರೆ.

ಸಂತ್ರಸ್ತ ಬಾಲಕಿಗೆ ಕಾನೂನು ಸೇವಾ ಪ್ರಾಧಿಕಾರದಿಂದ ₹ 5 ಲಕ್ಷ ಪರಿಹಾರ ಹಾಗೂ ದಂಡದ ಹಣದಲ್ಲಿ ಸಂತ್ರಸ್ತೆಗೆ ₹ 15,000 ಹಾಗೂ ಸರ್ಕಾರಕ್ಕೆ ₹ 5,000 ಪಾವತಿಸುವಂತೆ ಸೂಚಿಸಲಾಗಿದೆ.

ಪ್ರಕರಣದ ವಿವರ:

2018ರಲ್ಲಿ ಬಾಲಕಿಯ ಮನೆಗೆ ನುಗ್ಗಿದ ಅಪರಾಧಿ ಶಂಕರ್ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ. ಬಾಲಕಿ ಗರ್ಭಿಣಿಯಾದ ವಿಚಾರ ತಿಳಿದ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ಆರೋಪಿಯನ್ನು ಬಂಧಿಸಲಾಗಿತ್ತು. ಅಂದಿನ ಕಾರ್ಕಳ ಇನ್‌ಸ್ಪೆಕ್ಟರ್ ಜಾಯ್ ಅಂತೋನಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. 21 ಸಾಕ್ಷಿಗಳ ಪೈಕಿ 11 ಸಾಕ್ಷಿಗಳನ್ನು ವಿಚಾರಣೆ ನಡೆದಿತ್ತು.

ಪೋಕ್ಸೊ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.