ಭಾನುವಾರ, ಸೆಪ್ಟೆಂಬರ್ 25, 2022
29 °C

ಡಾ.ಬಿ.ಎ.ವಿವೇಕ ರೈಗೆ ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿ ಪ್ರದಾನ 6ರಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಹಿರಿಯ ಸಾಹಿತಿ, ಜಾನಪದ ವಿದ್ವಾಂಸ ಡಾ.ಬಿ.ಎ ವಿವೇಕ ರೈ ಅವರನ್ನು ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು ಪ್ರಶಸ್ತಿ ಪ್ರದಾನ ಸಮಾರಂಭ ಸೆ.6ರಂದು ಬೆಳಿಗ್ಗೆ 10 ಗಂಟೆಗೆ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ.

ಅತಿಥಿಗಳಾಗಿ ಮಾಹೆಯ ಸಹ ಕುಲಪತಿ ಡಾ.ಎಂ.ವೆಂಕಟರಾಯ ಪ್ರಭು ಉಪಸ್ಥಿತರಿರಲಿದ್ದಾರೆ. ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಪ್ರೊ.ಲಕ್ಷ್ಮೀನಾರಾಯಣ ಕಾರಂತ್ ಅಧ್ಯಕ್ಷತೆ ವಹಿಸಲಿದ್ದಾರೆ. ಡಾ.ತಾಳ್ತಜೆ ವಸಂತ ಕುಮಾರ್ ಅಭಿನಂದನಾ ಭಾಷಣ ಮಾಡಲಿದ್ದಾರೆ

ಮೈಸೂರಿನ ಡಿ. ಬನುಮಯ್ಯ ಕಾಲೇಜಿನ ನಿವೃತ್ತ ಪ್ರಾಚಾರ್ಯ ಪ್ರೊ.ಎಸ್. ಶಿವಾಜಿ ಜೋಯಿಸ್ ಗೋವಿಂದ ಪೈ. ಗ್ರಥನ ಕೌಶಲ ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ. ಕೆ.ಎನ್‌.ಶರಣ್ಯ, ಕೆ.ಎನ್‌.ಸುಮೇಧ ಸಹೋದರಿಯರಿಂದ ರಾಷ್ಟ್ರಕವಿ ಗೋವಿಂದ ಪೈಗಳ ಕಾವ್ಯಗಾಯನ ಕಾರ್ಯಕ್ರಮ ನಡೆಯಲಿದೆ ಎಂದು ರಾಷ್ಟ್ರಕವಿ ಗೋವಿಂದ ಪೈ ಪ್ರತಿಷ್ಠಾನದ ಆಡಳಿತಾಧಿಕಾರಿ ಡಾ.ವೈ.ಜಗದೀಶ್ ಶೆಟ್ಟಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು