ಸೋಮವಾರ, ಮಾರ್ಚ್ 27, 2023
32 °C

ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಡಾ.ರತ್ನಾಕರ ಕುನುಗೋಡು ಕವನ ಸಂಕಲನ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಕೊಡಮಾಡುವ ಕಡೆಂಗೋಡ್ಲು ಕಾವ್ಯ ಪ್ರಶಸ್ತಿ ಲೇಖಕ ಡಾ. ರತ್ನಾಕರ ಸಿ. ಕುನುಗೋಡು ಅವರಿಗೆ ಲಭಿಸಿದೆ. ಪ್ರಶಸ್ತಿಯು ₹ 10,000 ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.

ಡಾ. ರತ್ನಾಕರ ಸಿ.ಕುನುಗೋಡು ಅವರ ಎದೆನೆಲದ ಕಾವು’ ಅಪ್ರಕಟಿತ ಕವನ ಸಂಕಲನವನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕವಿ, ಕಾದಂಬರಿಕಾರರಾದ ಹಾಗೂ ಕನ್ನಡ ಸಾರಸ್ವತ ಲೋಕದಲ್ಲಿ ಖ್ಯಾತರಾಗಿದ್ದ ಕಡೆಂಗೋಡ್ಲು ಶಂಕರ ಭಟ್ಟರ ಹೆಸರಲ್ಲಿ ಪ್ರಶಸ್ತಿಯನ್ನು ನೀಡಲಾಗುತ್ತದೆ ಎಂದು ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ತಿಳಿಸಿದ್ದಾರೆ.

ಡಾ.ರತ್ನಾಕರ ಸಿ. ಕುನುಗೋಡು ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಎರೆಕೊಪ್ಪದವರು. ಶಿಕ್ಷಕರಾಗಿ, ಕನ್ನಡ ಉಪನ್ಯಾಸಕರಾಗಿ, ಪ್ರಸ್ತುತ ಸಹಾಯಕ ಪ್ರಾಧ್ಯಾಪಕರಾಗಿ ರಿಪ್ಪನ್ ಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಸಾಹಿತ್ಯ, ರಂಗಭೂಮಿ, ಸಂಘಟನೆ, ಸಾಮಾಜಿಕ ಪರಿವರ್ತನೆಗಳತ್ತ ಒಲವು ಮೂಡಿಸಿಕೊಂಡು ಕ್ರಿಯಾಶೀಲರಾಗಿರುವ ಡಾ.ರತ್ನಾಕರ ಕವಿತೆಗಳು ಮತ್ತು ಸಂಶೋಧನಾ ಲೇಖನಗಳ ಬರಹಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಡಾ. ರತ್ನಾಕರಸಿ. ಕುನುಗೋಡು ಅವರು ಶಿವಮೊಗ್ಗಜಿಲ್ಲೆ ಶಿಕಾರಿಪುರ ತಾಲ್ಲೂಕು ಎರೆಕೊಪ್ಪದವರು. ತಾಯಿ ಶ್ರೀಮತಿ ನಿಂಗಮ್ಮ, ತಂದೆ ಶ್ರೀಚನ್ನಬಸಪ್ಪ. ಪ್ರಾಥಮಿಕ ಶಾಲಾಶಿಕ್ಷಕರಾಗಿ, ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ, ಪ್ರಸ್ತುತ ಕನ್ನಡ ಸಹಾಯಕ ಪ್ರಾಧ್ಯಾಪಕರಾಗಿ ಸ.ಪ್ರ.ದ. ಕಾಲೇಜು, ರಿಪ್ಪನ್ಪೇಟೆ ಶಿವಮೊಗ್ಗ ಜಿಲ್ಲೆ ಇಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಶ್ರೀಯುತರು ಸಾಹಿತ್ಯ, ರಂಗಭೂಮಿ, ಸಂಘಟನೆ, ಸಾಮಾಜಿಕ ಪರಿವರ್ತನೆಗಳತ್ತ ಒಲವು ಮೂಡಿಸಿಕೊಂಡು ಕ್ರಿಯಾಶೀಲರಾಗಿದ್ದಾರೆ. ಕವಿತೆಗಳು ಮತ್ತು ಸಂಶೋಧನಾ ಲೇಖನಗಳ ಬರೆಹಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು