ಉಡುಪಿ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ಯೆನಪೋಯ ಮೆಡಿಕಲ್ ಕಾಲೇಜು ದೇರಳಕಟ್ಟೆ ಸಹಯೋಗದೊಂದಿಗೆ ಮಹಿಳಾ ಸ್ವಾಸ್ಥ್ಯ ಸಂರಕ್ಷಣಾ ತಪಾಸಣೆ ಹಾಗೂ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮವು ಸೋಮವಾರ ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ರಾಜ್ಯ ಶಾಖೆ ಆಡಳಿತ ಮಂಡಳಿ ಸದಸ್ಯ ವಿ.ಜಿ.ಶೆಟ್ಟಿ, ರೆಡ್‌ಕ್ರಾಸ್ ಮಾನವೀಯ ನೆಲೆಯಲ್ಲಿ ಸಮಾಜಮುಖಿ ಸೇವೆಗಳಲ್ಲಿ ನಿರತವಾಗಿದ್ದು ಕ್ಯಾನ್ಸರ್ ಬಗ್ಗೆಯೂ ವಿದ್ಯಾರ್ಥಿನಿಯರಿಗೆ ಜಾಗೃತಿ ಮೂಡಿಸುತ್ತಿದೆ. ಮಹಿಳೆಯರು ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ನಿಯಮಿತ ತಪಸಣೆಗೊಳಪಡುವ ಮೂಲಕ ಕ್ಯಾನ್ಸರ್ ಹಾಗೂ ಇತರೆ ಕಾಯಿಲೆಗಳಿಂದ ದೂರವಿರಬಹುದು ಎಂದರು.
ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಎಸ್. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಬಿ. ರತ್ನಾಕರ ಶೆಟ್ಟಿ, ಆಡಳಿತ ಮಂಡಳಿ ಸದಸ್ಯ ಟಿ. ಚಂದ್ರಶೇಖರ್, ಯುವ ರೆಡ್‌ಕ್ರಾಸ್ ಕಾರ್ಯಕ್ರಮ ಅಧಿಕಾರಿ ಪ್ರೊ.ಶೋಭಾ ಹಾಗೂ ವಿದ್ಯಾರ್ಥಿನಿಯರು ಇದ್ದರು
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.