ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿ ಭಾಗದಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಕಾನೂನಿನ ಅನ್ವಯ ಅವಕಾಶ ಕಲ್ಪಿಸುವ ಕುರಿತು ಮಂಗಳವಾರ ಬೆಂಗಳೂರಿನಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು.

ಸ್ಪೀಕರ್ ಯು.ಟಿ. ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಕರಾವಳಿ ಭಾಗದಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಇರುವ ಅಡೆತಡೆಗಳನ್ನು ನಿವಾರಿಸಲು ಪರಿಷ್ಕೃತ ನಿಯಮ ಜಾರಿಗೆ ತರುವ ನಿಟ್ಟಿನಲ್ಲಿ ಕೈಗೊಳ್ಳುತ್ತಿರುವ ಕ್ರಮಗಳ ಕುರಿತು ಗಣಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.

ವಾಣಿಜ್ಯ ಉದ್ದೇಶವಲ್ಲದ ಕೆಂಪುಕಲ್ಲು ಕ್ವಾರಿಗಳಿಗೆ ಅಧಿಕೃತವಾಗಿ ಪರವಾನಗಿ ಕೊಡುವ ವ್ಯವಸ್ಥೆ ಸರಳೀಕರಿಸಲಾಗುವುದು. ಈ ನಿಟ್ಟಿನಲ್ಲಿ ಎಸ್ಒಪಿ ಕರಡು ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿಸಿದರು.

ಕಾಲ ಮಿತಿಯೊಳಗೆ, ಸುಲಭ ರೀತಿಯಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಪರ ವಾನಗಿ ನೀಡುವ ವ್ಯವಸ್ಥೆ ಕಲ್ಪಿಸುವಂತೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದರು. ಕೆಂಪುಕಲ್ಲು ಗಣಿಗಾರಿಕೆ ಮಾಡುವವರು, ಅರ್ಜಿ ಸಲ್ಲಿಸುವವರಿಗೆ ತಿಂಗಳೊಳಗೆ ಪರವಾನಗಿ ನೀಡಲು ಹೆಚ್ಚಿನ ಗಮನ ಹರಿಸಬೇಕು ಎಂದರು.

ಕಂದಾಯ ಸಚಿವ ಕೃಷ್ಣ ಬೈರೇಗೌಡ, ಗಣಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ, ಸಚಿವ ಮಂಕಾಳ ವೈದ್ಯ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹಾಗೂ ಕರಾವಳಿ ಜಿಲ್ಲೆಗಳ ಶಾಸಕರು, ಅಧಿಕಾರಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.