ಶಿರ್ವ: ಪಡುಕುತ್ಯಾರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಅವರ ಜನ್ಮವರ್ಧಂತಿ ಹಾಗೂ ವಿದ್ಯಾರ್ಥಿ ಭವನ ಉದ್ಘಾಟನಾ ಸಮಾರಂಭ ಜು.15ರಂದು ಮಧ್ಯಾಹ್ನ 12.30ಕ್ಕೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಪಡುಕುತ್ಯಾರಿನಲ್ಲಿ ನಡೆಯಲಿದೆ.
ಪಡುಕುತ್ಯಾರಿನ ಆನೆಗುಂದಿ ಮಹಾಸಂಸ್ಥಾನದಲ್ಲಿ ನೂತನವಾಗಿ ನಿರ್ಮಿಸಲಾದ ನಾಗ ಧರ್ಮೇಂದ್ರ ಸರಸ್ವತಿ ವಿದ್ಯಾರ್ಥಿ ಭವನವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಉದ್ಘಾಟಿಸಲಿದ್ದಾರೆ.
ಪಡುಕುತ್ಯಾರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ದೀಪ ಪ್ರಜ್ವಲನಗೊಳಿಸುವರು. ಆನೆಗುಂದಿ ಪ್ರತಿಷ್ಠಾನದ ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಅಧ್ಯಕ್ಷ ವಿ. ಶ್ರೀಧರ ಆಚಾರ್ಯ ವಡೇರಹೋಬಳಿ ಅಧ್ಯಕ್ಷತೆ ವಹಿಸುವರು. ಸಮಾರಂಭದಲ್ಲಿ ಮಾಜಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ವಿನಯ್ ಕುಮಾರ್ ಸೊರಕೆ, ಶಾಸಕ ಸುನಿಲ್ ಕುಮಾರ್, ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನ ಧರ್ಮದರ್ಶಿ ಆನಂದ ಸಿ.ಕುಂದರ್, ಸಮಾಜ ಸೇವಕರಾದ ಮಿಥುನ್ ಎಂ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಗೌರವಾಧ್ಯಕ್ಷ ಪಿ.ವಿ.ಗಂಗಾಧರ ಆಚಾರ್ಯ ಉಡುಪಿ, ನಾಗ ಧರ್ಮೇಂದ್ರ ಸರಸ್ವತಿ ಸಂಸ್ಕೃತ ವೇದ ಸಂಜೀವಿನಿ ಪಾಠಶಾಲೆಯ ಪ್ರಧಾನ ಸಂಚಾಲಕ ಸೂರ್ಯ ಕುಮಾರ್ ಆಚಾರ್ಯ ಹಳೆಯಂಗಡಿ, ಆನೆಗುಂದಿ ಸರಸ್ವತಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಮೋಹನ್ ಕುಮಾರ್ ಬೆಳ್ಳೂರು, ಸರಸ್ವತಿ ಗೋವು ಪರ್ಯಾವರಣ್ ಸಂರಕ್ಷಣಾ ಟ್ರಸ್ಟ್ ಅಧ್ಯಕ್ಷ ಸುಂದರ ಆಚಾರ್ಯ ಬೆಳುವಾಯಿ, ಆನೆಗುಂದಿ ಗುರುಸೇವಾ ಪರಿಷತ್ ಕೇಂದ್ರ ಸಮಿತಿ ಅಧ್ಯಕ್ಷ ಗಣೇಶ್ ಆಚಾರ್ಯ ಕೆಮ್ಮಣ್ಣು, ಸರಸ್ವತಿ ಮಾತೃ ಮಂಡಳಿ ಅಧ್ಯಕ್ಷೆ ಸಂಧ್ಯಾ ಲಕ್ಷ್ಮಣ ಆಚಾರ್ಯ ಉಡುಪಿ, ಕುತ್ಯಾರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲತಾ ಎಸ್ ಕುತ್ಯಾರು ಭಾಗವಹಿಸುವರು.
ಹುಬ್ಬಳ್ಳಿಯ ಶಂಕರಾಚಾರ್ಯ ಕಡ್ಲಾಸ್ಕರ್ ಪಂಡಿತ್ ಅವರಿಗೆ ಆಸ್ಥಾನ ವಿದ್ವಾನ್ ಪದವಿ ಪ್ರದಾನ:
ಜುಲೈ 15ರಂದು ಬೆಳಿಗ್ಗೆ 11ಕ್ಕೆ ಆನೆಗುಂದಿ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಜನ್ಮವರ್ಧಂತಿ ಉತ್ಸವದ ಧರ್ಮ ಪ್ರಯುಕ್ತ ಸಂಸತ್ತಿನಲ್ಲಿ ಮಹಾಸಂಸ್ಥಾನದ ವಿದ್ವಾನ್ ಮಂಡಳಿಗೆ ವೈದಿಕ, ಗುರು ಪರಂಪರೆಗೆ ಅನುಪಮ ಸೇವೆ ಸಲ್ಲಿಸುತ್ತಿರುವ ಶಂಕರಾಚಾರ್ಯ ಕಡ್ಲಾಸ್ಕರ್ ಪಂಡಿತ್ ಹುಬ್ಬಳ್ಳಿ ಅವರಿಗೆ ಆಸ್ಥಾನ ವಿದ್ವಾನ್ ಪದವಿಯನ್ನು ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿ ಪ್ರಧಾನ ಮಾಡಲಿರುವರು.
ಆನೆಗುಂದಿ ಪ್ರತಿಷ್ಠಾನ ಹಾಗೂ ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಅಧ್ಯಕ್ಷ ವಿ.ಶ್ರೀಧರ ಆಚಾರ್ಯ ವಡೇರಹೋಬಳಿ ಅಧ್ಯಕ್ಷತೆ ವಹಿಸುವರು.
ಆಸ್ಥಾನ ವಿದ್ವಾಂಸರುಗಳಾದ ಪಂಜ ಭಾಸ್ಕರ್ ಭಟ್, ಬಾಲಚಂದ್ರ ಭಟ್, ಚಂದು ಕೂಡ್ಲು, ಅಂತರರಾಷ್ಟ್ರೀಯ ಜ್ಯೋತಿಷ್ಯ ವಿದ್ವಾನ್ ಉಮೇಶ್ ಆಚಾರ್ಯ ಪಡೀಲು, ಹರಿಶ್ಚಂದ್ರ ಎನ್. ಆಚಾರ್ಯ ಹಾಗೂ ವಿವಿಧೆಡೆಯ ಕಾಳಿಕಾಂಬಾ ವಿಶ್ವಕರ್ಮ ದೇವಾಲಯಗಳ ಧರ್ಮದರ್ಶಿಗಳು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.