ಬುಧವಾರ, ಜನವರಿ 22, 2020
19 °C
ಉರ್ದು ಶಾಲೆಯ ಪ್ರಭಾರ ಮುಖ್ಯಶಿಕ್ಷಕಿ ಮೇಲೆ ಹಲ್ಲೆ: ದೂರು ದಾಖಲು

ಎಸ್‌ಡಿಎಂಸಿ ಅಧ್ಯಕ್ಷರ ವಜಾಗೆ ಸಿಇಒಗೆ ವರದಿ ಸಲ್ಲಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಉಪ್ಪುಂದ ಸರ್ಕಾರಿ ಹಿರಿಯ ಉರ್ದು ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಮೇಲೆ ಹಲ್ಲೆ ನಡೆಸಿರುವ ಎಸ್‌ಡಿಎಂಸಿ ಅಧ್ಯಕ್ಷ ಮೋಹನಚಂದ್ರ ಅವರನ್ನು ವಜಾಗೊಳಿಸುವಂತೆ ಜಿಲ್ಲಾ ಪಂಚಾಯ್ತಿ ಸಿಇಒ ಅವರಿಗೆ ವರದಿ ಸಲ್ಲಿಸಲಾಗಿದೆ ಎಂದು ಡಿಡಿಪಿಐ ಶೇಷಶಯನ ಕಾರಿಂಜ ತಿಳಿಸಿದರು.‌

ಹಲ್ಲೆ ಸಂಬಂಧ ಶಿಕ್ಷಕಿ ಸಹ ಬೈಂದೂರು ಠಾಣೆಗೆ ದೂರು ನೀಡಿದ್ದಾರೆ. ದೂರಿನ ಪ್ರತಿಯನ್ನೂ ಸಿಇಒ ಅವರಿಗೆ ಕಳುಹಿಸಲಾಗಿದೆ. ಈ ಹಿಂದೆಯೂ ಶಿಕ್ಷಕಿಯೊಬ್ಬರಿಗೆ ಕಿರುಕುಳ ನೀಡಿದ ಆರೋಪ ಮೋಹನಚಂದ್ರ ಮೇಲಿದೆ. ಘಟನೆಯ ಸಮಗ್ರ ವರದಿಯನ್ನು ಸಲ್ಲಿಸುವಂತೆ ಬಿಇಒ ಅವರಿಗೆ ಸೂಚನೆ ನೀಡಲಾಗಿದೆ ಎಂದು ಡಿಡಿಪಿಐ ತಿಳಿಸಿದರು.

ಘಟನೆಯ ವಿವರ: ಎಸ್‌ಡಿಎಂಸಿ ಅಧ್ಯಕ್ಷ ಮೋಹನಚಂದ್ರ ಹಲ್ಲೆ ನಡೆಸಿದ ವಿಚಾರವನ್ನು ಶಿಕ್ಷಕಿ ಈಚೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಗಮನಕ್ಕೆ ತಂದಿದ್ದರು. ಕೂಡಲೇ ಸ್ಪಂದಿಸಿದ ಸಚಿವರು ಹಲ್ಲೆಮಾಡಿದ ವ್ಯಕ್ತಿಯನ್ನು ವಜಾಗೊಳಿಸಿ, ಕಠಿಣ ಕಾನೂನು ಕ್ರಮ ಜರುಗಿಸುವಂತೆ ಶಿಕ್ಷಣ ಇಲಾಖೆ ಆಯುಕ್ತರಿಗೆ ಹಾಗೂ ಎಸ್‌ಪಿ ಅವರಿಗೆ ಸೂಚನೆ ನೀಡಿದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು