ಉಡುಪಿ: 16 ಪಂಚಾಯಿತಿಗಳಿಗೆ ಮೀಸಲಾತಿ ಪ್ರಕಟ
ಉಡುಪಿ: ಉಡುಪಿ ತಾಲ್ಲೂಕಿನ 16 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಮೀಸಲಾತಿ ನಿಗದಿಪಡಿಸಲಾಗಿದೆ. 30 ತಿಂಗಳ ಮೊದಲ ಅವಧಿಗೆ ಮೀಸಲಾತಿ ಅನ್ವಯವಾಗಲಿದೆ.
ಪೆರ್ಡೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ‘ಅ‘, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ. ಕುಕ್ಕೆಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ (ಮಹಿಳೆ), ಭೈರಂಪಳ್ಳಿ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ‘ಅ’ ಮಹಿಳೆಗೆ, ಕಲ್ಯಾಣಪುರ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ‘ಅ’, ಉಪಾಧ್ಯಕ್ಷ ಸ್ಥಾನ ಸಾಮಾನ್ಯ, ತೋನ್ಸೆ ಅಧ್ಯಕ್ಷ ಸ್ಥಾನ ಅನುಸೂಚಿತ ಪಂಗಡ (ಮಹಿಳೆ), ಉಪಾಧ್ಯಕ್ಷ ಸ್ಥಾನ ಸಾಮಾನ್ಯ, ತೆಂಕ ನಿಡಿಯೂರು ಅಧ್ಯಕ್ಷ ಸ್ಥಾನ ಸಾಮಾನ್ಯ (ಮಹಿಳೆ), ಉಪಾಧ್ಯಕ್ಷ ಸ್ಥಾನ ಸಾಮಾನ್ಯ, ಬಡಾನಿಡಿಯೂರು ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಅನುಸೂಚಿತ ಜಾತಿ (ಮಹಿಳೆ), ಅಂಬಲಪಾಡಿ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ‘ಅ’ (ಮಹಿಳೆ), ಉಪಾಧ್ಯಕ್ಷ ಸ್ಥಾನ ಸಾಮಾನ್ಯ, ಕಡೇಕಾರು ಪಂಚಾಯಿತಿ ಅಧ್ಯಕ್ಷ ಸ್ಥಾನ ಅನುಸೂಚಿತ ಜಾತಿ (ಮಹಿಳೆ), ಉಪಾಧ್ಯಕ್ಷ ಸ್ಥಾನ ಸಾಮಾನ್ಯ, ಉದ್ಯಾವರ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಅನುಸೂಚಿತ ಪಂಗಡ (ಮಹಿಳೆ), 80 ಬಡಗಬೆಟ್ಟು ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ‘ಅ’ (ಮಹಿಳೆ), ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ‘ಬ’ (ಮಹಿಳೆ), ಆತ್ರಾಡಿ ಪಂಚಾಯಿತಿ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ‘ಬ’ (ಮಹಿಳೆ), ಉಪಾಧ್ಯಕ್ಷ ಸ್ಥಾನ ಸಾಮಾನ್ಯ, ಕೋಡಿಬೆಟ್ಟು ಪಂಚಾಯಿತಿ ಅಧ್ಯಕ್ಷ ಸ್ಥಾನ ಸಾಮಾನ್ಯ (ಮಹಿಳೆ), ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ‘ಅ’, ಬೊಮ್ಮರಬೆಟ್ಟು ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಹಿಂದುಳಿದ ವರ್ಗ ‘ಅ’ (ಮಹಿಳೆ), ಮಣಿಪುರ ಪಂಚಾಯಿತಿ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ (ಮಹಿಳೆ), ಅಲೆವೂರು ಪಂಚಾಯಿತಿ ಅಧ್ಯಕ್ಷ ಸ್ಥಾನ ಸಾಮಾನ್ಯ (ಮಹಿಳೆ)ಗೆ ಹಾಗೂ ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ‘ಅ’ ಅಭ್ಯರ್ಥಿಗೆ ಮೀಸಲಿಸಲಾಗಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.