ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿವೃತ್ತ ಅಧ್ಯಾಪಕ, ಗಾಯಕ  ಹಾರ್ಯಾಡಿ ಚಂದ್ರಶೇಖರ ಕೆದ್ಲಾಯ ನಿಧನ

Last Updated 24 ಜನವರಿ 2023, 21:54 IST
ಅಕ್ಷರ ಗಾತ್ರ

ಬ್ರಹ್ಮಾವರ (ಉಡುಪಿ ಜಿಲ್ಲೆ): ನಿವೃತ್ತ ಅಧ್ಯಾಪಕ, ಗಾಯಕ ಚಂದ್ರಶೇಖರ ಕೆದ್ಲಾಯ ಹಾರ್ಯಾಡಿ (72) ಮಂಗಳವಾರ ಬ್ರಹ್ಮಾವರದಲ್ಲಿ ನಿಧನರಾದರು. ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಮತ್ತು ಬಂಧುಗಳು ಇದ್ದಾರೆ.

ಬ್ರಹ್ಮಾವರದ ಅವರ ಮನೆಯಲ್ಲಿ ಬುಧವಾರ ಬೆಳಿಗ್ಗೆ 9ರಿಂದ 11ರವರೆಗೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದು, ನಂತರ ಹಾರ್ಯಾಡಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಕುಂದಾಪುರ ತಾಲ್ಲೂಕಿನ ಹೆಸ್ಕುತ್ತೂರು ಗ್ರಾಮದ ಹಾರ್ಯಾಡಿ ಯಲ್ಲಿ ಜನಿಸಿದ್ದ ಇವರು, ಹಂಗಾರಕಟ್ಟೆಯಲ್ಲಿ ಶಿಕ್ಷಕ ವೃತ್ತಿ ಜೀವನ ಆರಂಭಿಸಿ, ಮಂಗಳೂರಿನ →ಕೆನರಾ ಹೈಸ್ಕೂಲ್‌ ನಲ್ಲಿ 4 ವರ್ಷ, →ನಂತರ ಮೂರು →ದಶಕಗಳ ಕಾಲ →ಬ್ರಹ್ಮಾವರದ →ನಿರ್ಮಲ ಪ್ರೌಢ ಶಾಲೆಯಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಸಂಗೀತ, ಗಮಕ, ನಾಟಕಗಳ ಸಂಗೀತ ನಿರ್ದೇಶನ, ನೃತ್ಯ ರೂಪಕಗಳ ನಿರ್ದೇಶನ ಗಳ ಮೂಲಕ ಪ್ರಸಿದ್ಧ ಪಡೆದಿದ್ದರು.

ಕವಿ ಗೋಪಾಲಕೃಷ್ಣ ಅಡಿಗರ ‘ಕಟ್ಟುವೆವು ನಾವು ಹೊಸ ನಾಡೊಂದನು, ರಸದ ಬೀಡೊಂದನು’ ಕವನವನ್ನು ತಮ್ಮ ಗಾಯನ ಮೂಲಕ ಜನಪ್ರಿಯಗೊಳಿಸಿದ್ದು ಇವರ ಹೆಗ್ಗಳಿಕೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT