ಬುಧವಾರ, ಮಾರ್ಚ್ 3, 2021
31 °C
ಅಗತ್ಯ ವಸ್ತುಗಳ ಖರೀದಿಗೆ ಸಮಯ ಬದಲಾವಣೆ

ಬೆಳಿಗ್ಗೆ 7ರಿಂದ ರಾತ್ರಿ 7ರವರೆಗೆ ಅವಕಾಶ: ಶಾಸಕ ರಘುಪತಿ ಭಟ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಜಿಲ್ಲೆಯಲ್ಲಿ ಅಗತ್ಯ ವಸ್ತುಗಳ ಖರೀದಿ ಸಮಯವನ್ನು ಬೆಳಿಗ್ಗೆ 7ರಿಂದ ರಾತ್ರಿ 7ರವರೆಗೆ ವಿಸ್ತರಿಸಲಾಗಿದೆ ಎಂದು ಶಾಸಕ ರಘುಪತಿ ಭಟ್‌ ಮಾಧ್ಯಮಗಳಿಗೆ ತಿಳಿಸಿದರು.

ಕೋವಿಡ್ ಸೋಂಕಿತ ಪ್ರಕರಣಗಳು ಹೆಚ್ಚಿರುವ ನೆರೆಯ ಜಿಲ್ಲೆಗಳಲ್ಲಿ ದಿನನಿತ್ಯದ ವಸ್ತುಗಳ ಖರೀದಿಗೆ ರಾತ್ರಿ 7ರವರೆಗೆ ಅವಕಾಶ ನೀಡಲಾಗಿದೆ. ಗ್ರೀನ್‌ ಝೋನ್‌ನಲ್ಲಿರುವ ಉಡುಪಿಯಲ್ಲಿ ಮಧ್ಯಾಹ್ನ 1ರವರೆಗೆ ಮಾತ್ರ ಅನುಮತಿ ನೀಡಿರುವುದು ಸರಿಯಲ್ಲ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಶಾಸಕರು ಹಾಗೂ ಜಿಲ್ಲಾಧಿಕಾರಿ ಜತೆ ಚರ್ಚಿಸಿದ್ದು ಎಲ್ಲರೂ ಸಮಯ ವಿಸ್ತರಣೆಗೆ ಒಪ್ಪಿಕೊಂಡಿದ್ದಾರೆ. ಮಂಗಳವಾರದಿಂದ ರಾತ್ರಿ 7ರವರೆಗೆ ಎಲ್ಲ ಅಗಂಡಿಗಳು ತೆರೆದಿರಲಿವೆ. ಸಾರ್ವಜನಿಕರು ಅಂತರ ಕಾಯ್ದುಕೊಂಡು ವ್ಯವಹರಿಸಬೇಕು ಎಂದು ಶಾಸಕರು ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು