ಭಾನುವಾರ, ಆಗಸ್ಟ್ 14, 2022
20 °C

ಉಡುಪಿ | ಶ್ಯಾಮಾಪ್ರಸಾದ ಮುಖರ್ಜಿ ಸಂಸ್ಮರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬ್ರಹ್ಮಾವರ: ಭಾರತೀಯ ಜನಸಂಘದ ಸಂಸ್ಥಾಪಕ ಡಾ.ಶ್ಯಾಮಾಪ್ರಸಾದ ಮುಖರ್ಜಿ ಅವರ ಬಲಿದಾನ ದಿನದ ಕಾರ್ಯಕ್ರಮ ಬ್ರಹ್ಮಾವರ ಬಿಜೆಪಿ ಕಚೇರಿಯಲ್ಲಿ ನಡೆಯಿತು.

ಬಿಜೆಪಿ ಗ್ರಾಮಾಂತರ ಅಧ್ಯಕ್ಷೆ ವೀಣಾ ವಿ. ನಾಯ್ಕ ಶ್ಯಾಮಾಪ್ರಸಾದ ಜೀವನಚರಿತ್ರೆ ಬಗ್ಗೆ ತಿಳಿಸಿ, ಕಾರ್ಯಕರ್ತರು ಅವರ ಚಿಂತನೆಯನ್ನು ಅಳವಡಿಸಿಕೊಳ್ಳಬೇಕು. ಮಂಡಲದ ಪ್ರತಿ ಶಕ್ತಿಕೇಂದ್ರದಲ್ಲಿ ಪರಿಸರ ಸ್ವಚ್ಛತೆ, ಗಿಡ ನೆಡುವುದು ಹಾಗೂ ಇನ್ನಿತರ ಕಾರ್ಯಕ್ರಮವನ್ನು ಮುಖರ್ಜಿ ಅವರ ಜನ್ಮದಿನ ಜುಲೈ 6 ವರೆಗೆ ಆಚರಿಸಬೇಕು ಎಂದು ತಿಳಿಸಿದರು.

ಮಂಡಲದ ವತಿಯಿಂದ ಪ್ರತಿ ಶಕ್ತಿಕೇಂದ್ರಕ್ಕೆ ಮುಖರ್ಜಿ ಅವರ ಭಾವಚಿತ್ರ ನೀಡಲಾಯಿತು.

ಜಿಲ್ಲಾ ಬಿಜೆಪಿ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್ ಕಾರ್ಯಕರ್ತರಿಗೆ ಪಕ್ಷ ಯಾಕೆ ವಿನೂತನ ಕಾರ್ಯಕ್ರಮ ನೀಡುತ್ತದೆ ಹಾಗೂ ಇದರಿಂದ ಪಕ್ಷ ಸಂಘಟನೆ ಹೇಗೆ ಆಗುತ್ತದೆ ಎನ್ನುವುದರ ಬಗ್ಗೆ ಮಾಹಿತಿ ನೀಡಿದರು.

ಮಂಡಲದ ಉಪಾಧ್ಯಕ್ಷ ರಘುಪತಿ ಬ್ರಹ್ಮಾವರ, ಬಿರ್ತಿ ರಾಜೇಶ್ ಶೆಟ್ಟಿ, ವಾರಂಬಳ್ಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮಹೇಂದ್ರ ಕುಮಾರ್, ಪ್ರಧಾನ ಕಾರ್ಯದರ್ಶಿ ದೇವಾನಂದ, ಉಪ್ಪೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ದರಣೇಶ, ಪ್ರಧಾನ ಕಾರ್ಯದರ್ಶಿ ಮಹೇಶ್ ಕೊಳಂಬೆ, ಆರೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಮತಾ ಶೆಟ್ಟಿ, ಚಾಂತಾರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮೀರಾ ಸದಾನಂದ ಪೂಜಾರಿ, ಉಪಾಧ್ಯಕ್ಷ ಲಕ್ಷ್ಮೀ, ಹಂದಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಉದಯ ಪೂಜಾರಿ ಇದ್ದರು.

ಮಂಡಲದ ಪ್ರಧಾನ ಕಾರ್ಯದರ್ಶಿ ಗಣೇಶ್ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು. ಸಚಿನ್ ಪೂಜಾರಿ ವಂದಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.