ಸೋಮವಾರ, ಸೆಪ್ಟೆಂಬರ್ 26, 2022
22 °C

ಪಡುಬಿದ್ರಿ: 3 ರಸ್ತೆಗಳು ಸಂಚಾರಕ್ಕೆ ಮುಕ್ತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪಡುಬಿದ್ರಿ: ಪಂಚಾಯಿತಿಯ 5ನೇ ವಾರ್ಡ್‌ನಲ್ಲಿ ₹ 1.10 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪ‍ಡಿಸಲಾದ 3 ರಸ್ತೆಗಳನ್ನು ಶಾಸಕ ಲಾಲಾಜಿ ಆರ್.ಮೆಂಡನ್ ಈಚೆಗೆ ಲೋಕಾರ್ಪಣೆಗೊಳಿಸಿದರು.

ಪಂಚಾಯಿತಿ ವ್ಯಾಪ್ತಿಯ ಉಳಿದ ವಾರ್ಡ್‌ಗಳಲ್ಲಿ ರಸ್ತೆ ಅಭಿವೃದ್ಧಿಗೆ ಅನುದಾನ ಮಂಜೂರಾಗಿದ್ದು ಶೀಘ್ರದಲ್ಲಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಗುವುದು ಎಂದು ಶಾಸಕರು ತಿಳಿಸಿದರು.

ಪಡುಬಿದ್ರಿ ಪಂಚಾಯಿತಿ ಅಧ್ಯಕ್ಷ ರವಿ ಶೆಟ್ಟಿ, ಉಪಾಧ್ಯಕ್ಷೆ ಯಶೋದಾ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ, ಗ್ರಾಮ ಪಂಚಾಯಿತಿ ಸದಸ್ಯರಾದ ಮಹೇಂದ್ರ ಪೂಜಾರಿ, ವಿನಾಯಕ್ ಪುತ್ರನ್, ಅಶೋಕ್ ಪೂಜಾರಿ, ಮುಖಂಡರಾದ ಜಗದೀಶ್ ಮುರುಡಿ, ರಾಜೇಂದ್ರ ಪ್ರಭು, ಲಕ್ಷ್ಮಣ್ ಪೂಜಾರಿ, ಸುಧಾ ಪೂಜಾರಿ, ಅಪ್ಪು ಪೂಜಾರಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು