ಉಡುಪಿ: ಸಾರ್ವಜನಿಕರು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವುದರಿಂದ ಅಪಘಾತಗಳನ್ನು ತಪ್ಪಿಸಬಹುದು ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಸ್ತೆಯಲ್ಲಿ ವಾಹನ ಚಾಲನೆ ಮಾಡುವಾಗ ಸೀಟ್ ಬೆಲ್ಟ್ ಧರಿಸುವುದು, ಹೆಲ್ಮೆಟ್ ಧರಿಸುವುದರಿಂದ ಅಪಘಾತಗಳಾದರೂ ಪ್ರಾಣ ಉಳಿಯುವ ಸಾಧ್ಯತೆ ಹೆಚ್ಚಾಗಿರುತ್ತವೆ. ಸಂಚಾರಿ ನಿಯಮಗಳನ್ನು ಪಾಲಿಸುವುದರಿಂದ ಅಪಘಾತಗಳಿಂದ ದೂರವಿರಬಹುದು ಎಂದರು.

ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಗುರುತಿಸಲಾಗಿರುವ 34 ಬ್ಲಾಕ್ ಸ್ಪಾಟ್ಗಳನ್ನು 2 ತಿಂಗಳ ಅವಧಿಯಲ್ಲಿ ಸಂಚಾರಕ್ಕೆ ಸುರಕ್ಷಿತ ಸ್ಥಳಗಳನ್ನಾಗಿ ಮಾಡಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ, ಪ್ರಾದೇಶಿಕ ಸಾರಿಗೆ ಅಧಿಕಾರಿ, ಪೊಲೀಸರು ಮತ್ತು ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು ಮತ್ತೊಮ್ಮೆ ಎಲ್ಲಾ ಬ್ಲಾಕ್ ಸ್ಪಾಟ್ ಸ್ಥಳಗಳನ್ನು ಪರಿಶೀಲಿಸಿ, ಸ್ಥಿತಿಗತಿ ಅರಿತು, ತೆಗೆದುಕೊಳ್ಳಬಹುದಾದ ಸುರಕ್ಷತಾ ಕ್ರಮ ಹಾಗೂ ಕಾಮಗಾರಿಗಳ ಕುರಿತು ವರದಿ ನೀಡಬೇಕು ಎಂದು ಸೂಚಿಸಿದರು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಗತ್ಯ ಸೂಚನಾ ಫಲಕಗಳು, ಎಚ್ಚರಿಕೆ ಫಲಕಗಳನ್ನು ಅಳವಡಿಸುವುದರ ಜತೆಗೆ ವಾಹನಗಳ ಸುಗಮ ಮತ್ತು ಸುರಕ್ಷಿತ ಪ್ರಯಾಣಕ್ಕೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.

ರಸ್ತೆ ಸುರಕ್ಷತೆ, ಸಂಚಾರಿ ನಿಯಮಗಳ ಪಾಲನೆ ಕುರಿತು ಅರಿವು ಮೂಡಿಸಲು ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳ ಶಿಕ್ಷಕರಿಗೆ ಸೂಕ್ತ ತರಬೇತಿ ಕೊಟ್ಟು ಅವರ ಮೂಲಕ ಮಕ್ಕಳಿಗೆ ಅರಿವು ಮೂಡಿಸಬೇಕು ಎಂದು ಸೂಚಿಸಿದರು.

ರಸ್ತೆ ನಿರ್ಮಾಣ ಕಾಮಗಾರಿ ಅನುಷ್ಠಾನಗೊಳಿಸುವ ಎಲ್ಲ ಇಲಾಖೆಗಳು ರಸ್ತೆ ನಿರ್ಮಾಣದ ಸಂದರ್ಭದಲ್ಲಿಯೇ ಸುಗಮ ಮತ್ತು ಸುರಕ್ಷಿತ ಪ್ರಯಾಣಕ್ಕೆ ಅಗತ್ಯವಿರುವ ಸೌಲಭ್ಯಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮುಕ್ತಾಯಗೊಂಡಿದ್ದರೂ ರಸ್ತೆ ಬದಿಯಲ್ಲಿ ಕಾಮಗಾರಿ ಸಾಮಾಗ್ರಿಗಳನ್ನು ತೆರವುಗೊಳಿಸಿದಿರುವುದು ಅಪಘಾತಗಳಿಗೆ ಕಾರಣವಾಗುತ್ತಿವೆ. ಕೂಡಲೇ ಕಾಮಗಾರಿ ಸಾಮಗ್ರಿಗಳನ್ನು ತೆರವುಗೊಳಿಸುವಂತೆ ಎಸ್ಪಿ ವಿಷ್ಣುವರ್ಧನ್ ಸೂಚಿಸಿದರು.

ಜಿಲ್ಲೆಯಲ್ಲಿ ಜ.2021ರಿಂದ ಸೆಪ್ಟೆಂಬರ್ವರೆಗೆ ಸಂಚಾರಿ ನಿಯಮ ಉಲ್ಲಂಘಿಸಿರುವ ಸಂಬಂಧ 48,000 ಪ್ರಕರಣಗಳನ್ನು ದಾಖಲಿಸಿ ₹ 2.26 ಕೋಟಿ ದಂಡ ಸಂಗ್ರಹಿಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದರು.

ರಸ್ತೆ ಸುರಕ್ಷತಾ ಸಭೆಗೆ ನೋಟೀಸ್ ನೀಡಿದ್ದರೂ ಆಗಮಿಸಿದ ರಾಷ್ಟ್ರೀಯ ಹೆದ್ದಾರಿ 66ರ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಪ್ರಾದೇಶಿಕ ಸಾರಿಗೆ ಅಧಿಕಾರಿ ಗಂಗಾಧರ್ ಹಾಗೂ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.