ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಚಾಯತ್ ರಾಜ್ ವ್ಯವಸ್ಥೆಗೆ ಕೊಡಲಿ ಏಟು

Last Updated 6 ಅಕ್ಟೋಬರ್ 2022, 16:09 IST
ಅಕ್ಷರ ಗಾತ್ರ

ಉಡುಪಿ: ಸರ್ಕಾರ ಗ್ರಾಮ ಪಂಚಾಯಿತಿ ಅಧ್ಯಕ್ಷರ ಹಾಗೂ ಸದಸ್ಯರ ಅಧಿಕಾರವನ್ನು ಮೊಟಕುಗೊಳಿಸಿ ಗ್ರಾಮ ಸ್ವರಾಜ್ಯದ ಆಶಯಗಳಿಗೆ ಕೊಡಲಿಯೇಟು ನೀಡಿದೆ ಎಂದು ಕರ್ನಾಟಕ ರಾಜ್ಯ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಸಹ ಸಂಚಾಲಕಿ ರೋಶನಿ ಒಲಿವರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಮುಂದೆ ಬಿಲ್ ಪಾಸ್ ಮಾಡುವ ಅಥವಾ ಚೆಕ್ ಮೂಲಕ ಪಾವತಿಸುವ ವ್ಯವಸ್ಥೆಗೆ ಅಧ್ಯಕ್ಷರು ಸಹಿ ಮಾಡುವಂತಿಲ್ಲ. ಅಧ್ಯಕ್ಷರಿಗಿದ್ದ ಅಧಿಕಾರವನ್ನು ಪಿಡಿಒ ಮತ್ತು ಲೆಕ್ಕ ಸಹಾಯಕರಿಗೆ ಜಂಟಿಯಾಗಿ ನೀಡಲಾಗಿದೆ.

ನಿರಾಕ್ಷೇಪಣಾ ಪತ್ರ ಸೇರಿದಂತೆ ಮುಂತಾದ ಆದೇಶಗಳನ್ನು ಪಂಚಾಯತ್ ಸಭೆಗಳಲ್ಲಿ ಮಂಡಿಸಿ ಯಾವುದೇ ಆಕ್ಷೇಪಣೆಗಳಿಲ್ಲದಿದ್ದರೆ ಮುಂದೆ ಆಯಾಯ ವ್ಯಕ್ತಿಗೆ ನೀಡುವ ಅಧಿಕಾರವನ್ನು ನೇರವಾಗಿ ಪಿಡಿಒಗಳಿಗೆ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದರಿಂದ ಭ್ರಷ್ಟಾಚಾರ ಇನ್ನಷ್ಟು ಹೆಚ್ಚಾಗಲಿದ್ದು, ಪಂಚಾಯತ್ ಅಧ್ಯಕ್ಷರ ಹಾಗೂ ಪಂಚಾಯತ್ ಸದಸ್ಯರ ಅಧಿಕಾರವನ್ನು ಕಸಿದುಕೊಳ್ಳಲು ಆದೇಶ ಮಾಡುವುದು ಸರಿಯಲ್ಲ. ಈ ವ್ಯವಸ್ಥೆಯನ್ನು ಕೂಡಲೇ ತಿದ್ದುಪಡಿ ಮಾಡದಿದ್ದಲ್ಲಿ ಎಲ್ಲ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರನ್ನು ಸೇರಿಸಿಕೊಂಡು ತೀವ್ರ ಹೋರಾಟ ಮಾಡುವುದಾಗಿ ರೋಶನಿ ಒಲಿವರ್ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT