ಬುಧವಾರ, ಜನವರಿ 19, 2022
24 °C

ಕೃಷಿ ಕಾಯ್ದೆ: ಕೇಂದ್ರವು ಎರಡು ಹೆಜ್ಜೆ ಮುಂದಿಡಲಿದೆ–ಕಲ್ಲಡ್ಕ ಪ್ರಭಾಕರ ಭಟ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್

ಉಡುಪಿ: ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಂಡು ಕೇಂದ್ರ ಸರ್ಕಾರ ಒಂದು ಹೆಜ್ಜೆ ಹಿಂದಿಟ್ಟಿರುವುದು ತಪ್ಪಲ್ಲ; ಮುಂದೆ ಎರಡು ಹೆಜ್ಜೆ ಮುಂದಿಡಲಿದೆ ಎಂದು ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.

ನಗರದಲ್ಲಿ ಭಾನುವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಕೃಷಿ ಕಾಯ್ದೆಗಳು ಜನಮಾನಸಕ್ಕೆ ಮುಟ್ಟಬೇಕು ಎಂದು ಒಂದು ವರ್ಷ ಕಾದರೂ ಪ್ರಯೋಜನವಾಗಲಿಲ್ಲ. ಹಾಗಾಗಿ, ಜನಸಾಮಾನ್ಯರಿಗೆ ತೊಂದರೆಯಾಗಬಾರದು ಎಂದು ರೈತರ ಪರವಾಗಿದ್ದ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಪಾಪಸ್ ಪಡೆದಿದೆ. ಸರ್ಕಾರದ ನಿರ್ಧಾರ ಉತ್ತಮವಾಗಿದೆ ಎಂದು ಸಮರ್ಥಿಸಿಕೊಂಡರು.

ವಿಪಕ್ಷಗಳು ವಿರೋಧಿ ಪಕ್ಷಗಳಾಗಿದ್ದು, ಸರ್ಕಾರದ ಎಲ್ಲ ಕಾರ್ಯಗಳನ್ನು ವಿರೋಧಿಸುತ್ತಿವೆ. ಭಿನ್ನ ಅಭಿಪ್ರಾಯಗಳಿದ್ದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚರ್ಚೆಗಳು ನಡೆಯಬೇಕು. ಆದರೆ, ವಿರೋಧ ಪಕ್ಷಗಳು ಹಾಗೂ ಪ್ರತಿಭಟನಾಕಾರರು ಸರ್ಕಾರದ ಜತೆಗೆ ಚರ್ಚೆಗೆ ಸಿದ್ಧರಿಲ್ಲ. ಮುಂದೆ, ಚರ್ಚೆ, ಮಾತುಕತೆ ಹಾಗೂ ತಿದ್ದುಪಡಿಗಳೊಂದಿಗೆ ಮತ್ತೆ ಕೃಷಿ ಕಾಯ್ದೆಗಳನ್ನು ಅನುಷ್ಠಾನಕ್ಕೆ ತರಲಿದೆ ಎಂದು ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.

ಇದನ್ನೂ ಓದಿ:

ಮುಂಬರುವ ಚುನಾವಣೆಗಳ ದೃಷ್ಟಿಯಿಂದ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದಿಲ್ಲ. ರಾಷ್ಟ್ರದ ದೃಷ್ಟಿಯಿಂದ ನಿರ್ಧಾರ ತೆಗೆದುಕೊಂಡಿದೆ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು