ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದೇಶಾಂಗ ಸಚಿವ ಜೈಶಂಕರ್ ಉಡುಪಿಗೆ 19ರಂದು

Last Updated 10 ಮಾರ್ಚ್ 2023, 15:46 IST
ಅಕ್ಷರ ಗಾತ್ರ

ಉಡುಪಿ: ಕೇಂದ್ರ ವಿದೇಶಾಂಗ ಸಚಿವ ಎಸ್.ಜೈಶಂಕರ್ ಮಾರ್ಚ್‌ 19ರಂದು ಮಧ್ಯಾಹ್ನ 2 ಗಂಟೆಗೆ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ನಡೆಯಲಿರುವ ಪ್ರಬುದ್ಧರ ಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

12ರಂದು ಮಹಿಳಾ ಸಮಾವೇಶ:

ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಬೃಹತ್ ಮಹಿಳಾ ಸಮಾವೇಶ ಮಾರ್ಚ್‌ 12ರಂದು ಮಧ್ಯಾಹ್ನ 3 ಗಂಟೆಗೆ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೋಟೇಶ್ವರದ ಕುರುಕ್ಷೇತ್ರ ಮೈದಾನದಲ್ಲಿ ನಡೆಯಲಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವೀಣಾ ಎಸ್. ಶೆಟ್ಟಿ ತಿಳಿಸಿದ್ದಾರೆ.

ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಮಹಿಳಾ ಸಮಾವೇಶ ಉದ್ಘಾಟಿಸಲಿದ್ದು, ಚಲನಚಿತ್ರ ನಟಿ ಹಾಗೂ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಮಾಳವಿಕಾ ಅವಿನಾಶ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಅತಿಥಿಗಳಾಗಿ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸಹಿತ ಜಿಲ್ಲೆಯ ಸಚಿವರು, ಶಾಸಕರು ಹಾಗೂ ಪಕ್ಷದ ರಾಜ್ಯ ಮತ್ತು ಜಿಲ್ಲಾ ಮುಖಂಡರು ಭಾಗವಹಿಸಲಿದ್ದಾರೆ.

ಪಕ್ಷದ ಪ್ರಮುಖರು, ಜಿಲ್ಲಾ, ಮೋರ್ಚಾ, ಪ್ರಕೋಷ್ಠಗಳ ಸಹಿತ ಆರು ಮಂಡಲಗಳ ವ್ಯಾಪ್ತಿಯ ಮಹಿಳಾ ಮೋರ್ಚಾ ಮತ್ತು ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT