ಉಡುಪಿ: ಗೃಹ ಬಳಕೆ ಅಡುಗೆ ಅನಿಲ ಹಾಗೂ ವಾಣಿಜ್ಯ ಬಳಕೆಯ ಸಿಲಿಂಡರ್ಗಳನ್ನು ಕಾಳಸಂತೆಯಲ್ಲಿ ಮಾರಾಟ, ಸಂಗ್ರಹಣೆ, ಶೇಖರಣೆ ಹಾಗೂ ಸಾಗಾಣಿಕೆ ಮಾಡುವುದು ಕಂಡುಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಹೇಳಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗ್ಯಾಸ್ ಏಜೆನ್ಸಿ ಮಾಲೀಕರೊಂದಿಗೆ ಗುರುವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅನಧಿಕೃತವಾಗಿ ಗ್ಯಾಸ್ ಸಿಲಿಂಡರ್ಗಳ ರಿಫಿಲ್ಲಿಂಗ್ ಪ್ರಕರಣಗಳು ಕಂಡುಬಂದಲ್ಲಿ ಕಾನೂನಿನ ಅನ್ವಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಸಾರ್ವಜನಿಕ ಆಸ್ಪತ್ರೆ, ವಸತಿ ನಿಲಯ, ಅತೀ ಅವಶ್ಯಕ ವಸ್ತುಗಳನ್ನು ಉತ್ಪಾದಿಸುವ ಕೈಗಾರಿಕಾ ಘಟಕಗಳಿಗೆ ಹಾಗೂ ಗೃಹಬಳಕೆಗೆ ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಆದ್ಯತೆಯ ಮೇಲೆ ಅನಿಲ ಪೂರೈಸಲು ಕ್ರಮ ವಹಿಸುವಂತೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಹೆಚ್ಚು ಗೃಹ ಬಳಕೆದಾರರು ಎರಡು ಅನಿಲ ಸಂಪರ್ಕ ಹೊಂದಿದ್ದು, ಏಕ ಸಿಲಿಂಡರ್ ಹೊಂದಿರುವವರಿಗೆ ಆದ್ಯತೆಯ ಮೇಲೆ ಅನಿಲ ಪೂರೈಕೆ ಮಾಡಬೇಕು. ಅನಿಲದ ಮಿತ ಬಳಕೆಯ ಬಗ್ಗೆ ಸಾರ್ವಜನಿಕರು, ಸಂಘ-ಸಂಸ್ಥೆಗಳು ಮತ್ತು ಇತರರಿಗೆ ಜಾಗೃತಿ ಮೂಡಿಸಬೇಕು ಎಂದರು.

ಆರೋಗ್ಯ, ವಾಣಿಜ್ಯ, ಕೈಗಾರಿಕೆ, ಇಂಧನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಾರಿಗೆ, ಪೊಲೀಸ್ ಇಲಾಖೆ ಸೇರಿದಂತೆ ಪ್ರಮುಖ ಇಲಾಖೆಗಳ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಘ-ಸಂಸ್ಥೆಗಳಿಗೆ ಅಗತ್ಯವಿರುವ ಅನಿಲ ಸಿಲಿಂಡರ್ಗಳ ಬೇಡಿಕೆಯ ಪಟ್ಟಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಸಲ್ಲಿಸುವಂತೆ ಸೂಚಿಸಿದರು.

ಜಿಲ್ಲೆಯ ಇಂದಿರಾ ಕ್ಯಾಂಟೀನ್ಗಳಲ್ಲಿ ಆಹಾರ ಪೂರೈಕೆಯಲ್ಲಿ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಸಾರ್ವಜನಿಕರ ತೊಂದರೆಗಳನ್ನು ನಿವಾರಿಸಲು ಸಹಾಯವಾಣಿ ಸಂಖ್ಯೆ 112 ಅನ್ನು ಪ್ರಚಾರಪಡಿಸುವುದರೊಂದಿಗೆ ಸ್ವೀಕರಿಸಿದ ದೂರುಗಳನ್ನು ತಕ್ಷಣವೇ ಪರಿಹರಿಸುವಂತೆ ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಮಾತನಾಡಿ, ಜನರು ಗೃಹ ಬಳಕೆಯ ಅನಿಲವನ್ನು ವಾಹನಗಳಿಗೆ ಬಳಸದಂತೆ ನೋಡಿಕೊಳ್ಳಬೇಕು ಎಂದರು.

ಆಹಾರ ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ರವೀಂದ್ರ, ಗ್ಯಾಸ್ ಏಜೆನ್ಸಿಯ ಮಾಲೀಕರುಗಳು, ಸರಬರಾಜುದಾರರು ಉಪಸ್ಥಿತರಿದ್ದರು.

‘ವದಂತಿಗಳಿಗೆ ಕಿವಿಕೊಡಬೇಡಿ’

ಯುದ್ಧದ ಪರಿಣಾಮವಾಗಿ ದೇಶದಲ್ಲಿ ಅಡುಗೆ ಅನಿಲ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಬಹುದು ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವಂದತಿಗಳಿಗೆ ಜಿಲ್ಲೆಯ ಸಾರ್ವಜನಿಕರು ಕಿವಿಕೊಡಬೇಡಿ. ಜಿಲ್ಲೆಯಲ್ಲಿ ಗೃಹಬಳಕೆ ಅಡುಗೆ ಅನಿಲದ ದಾಸ್ತಾನು ಸಾಕಷ್ಟು ಪ್ರಮಾಣದಲ್ಲಿದ್ದು ಗ್ರಾಹಕರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಅನಿಲ ಪೂರೈಕೆ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ತಪ್ಪು ಸಂದೇಶಗಳನ್ನು ಹರಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.