ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬ್ರಹ್ಮಾವರ: ತಾಲ್ಲೂಕು ಸಾಹಿತ್ಯ ಸಮ್ಮೇಳನ ನಾಳೆ

Published 10 ಜೂನ್ 2024, 14:05 IST
Last Updated 10 ಜೂನ್ 2024, 14:05 IST
ಅಕ್ಷರ ಗಾತ್ರ

ಬ್ರಹ್ಮಾವರ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾ ಘಟಕ, ಬ್ರಹ್ಮಾವರ ತಾಲ್ಲೂಕು ಘಟಕದ ಆಶ್ರಯದಲ್ಲಿ ತಾಲ್ಲೂಕು ಪತ್ರಕರ್ತರ ಸಂಘ, ಮಣೂರು ಪಡುಕೆರೆ ಗೀತಾನಂದ ಫೌಂಡೇಷನ್ ಸಹಕಾರದಲ್ಲಿ ಬ್ರಹ್ಮಾವರ ತಾಲ್ಲೂಕು 4ನೇ ಸಾಹಿತ್ಯ ಸಮ್ಮೇಳನ ಇದೇ 11ರಂದು ಸಾಲಿಗ್ರಾಮ ಪಾರಂಪಳ್ಳಿಯ ಮಹಾವಿಷ್ಣು ಸಭಾಂಗಣದಲ್ಲಿ ನಡೆಯಲಿದೆ.

ನಿವೃತ್ತ ಮುಖ್ಯಶಿಕ್ಷಕ, ಸಾಹಿತಿ ಪಾರಂಪಳ್ಳಿ ನರಸಿಂಹ ಐತಾಳ ಅಧ್ಯಕ್ಷತೆ ವಹಿಸುವರು. ಬೆಳಿಗ್ಗೆ 8.30ಕ್ಕೆ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶಿವ ನಾಯ್ಕ ರಾಷ್ಟ್ರ ಧ್ವಜಾರೋಹಣ ಮಾಡುವರು. ಕಸಾಪ ತಾಲ್ಲೂಕು ಘಟಕ ಅಧ್ಯಕ್ಷ ಗುಂಡ್ಮಿ ರಾಮಚಂದ್ರ ಐತಾಳ ಪರಿಷತ್ ಧ್ವಜಾರೋಹಣ ನೆರವೇರಿಸುವರು. ಬೆಳಿಗ್ಗೆ 9.45ಕ್ಕೆ ಸಮ್ಮೇಳನದ ಉದ್ಘಾಟನೆ ನಡೆಯಲಿದ್ದು, ಉದ್ಯಮಿ ಆನಂದ ಸಿ.ಕುಂದರ್ ಕಾರ್ಯಕ್ರಮಕ್ಕೆ ಚಾಲನೆ ನೀಡುವರು

ಶಾಸಕ ಕಿರಣ್ ಕುಮಾರ್ ಕೊಡ್ಗಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕಸಾಪ ಜಿಲ್ಲಾ ಘಟಕ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯ ನುಡಿಗಳನ್ನಾಡುವರು. 11.45ಕ್ಕೆ ‘ಬ್ರಹ್ಮಾವರ ತಾಲ್ಲೂಕಿನ ವಿಶೇಷಗಳು–ಒಂದು ಬೀಸು ನೋಟ’ ವಿಶೇಷ ಉಪನ್ಯಾಸ ನಡೆಯಲಿದೆ. ನಂತರ ನೃತ್ಯ ವೈವಿಧ್ಯ, ಬಹುವಿಧ ಗೋಷ್ಠಿ, 2.30ಕ್ಕೆ ಯಕ್ಷ ಲಯ ವಿನ್ಯಾಸ ಕಾರ್ಯಕ್ರಮ, ಸಮ್ಮೇಳನ ಅಧ್ಯಕ್ಷರೊಂದಿಗೆ ಮಾತುಕತೆ, ಸಂಜೆ 4ಕ್ಕೆ ಸಮಾರೋಪ ಸಮಾರಂಭ, ಸಾಧಕರಿಗೆ ಸನ್ಮಾನ ನಡೆಯಲಿದೆ. ಸಭಾ ಕಾರ್ಯಕ್ರಮದ ನಂತರ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಗುಂಡ್ಮಿ ರಾಮಚಂದ್ರ ಐತಾಳ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT