ಶನಿವಾರ, ಮೇ 30, 2020
27 °C
ಇಬ್ಬರು ಅಧಿಕಾರಿಗಳ ಅಮಾನತಿಗೆ ಶಿಫಾರಸು: ಡಿಸಿ ಜಗದೀಶ್‌

ಮರಳು ದಂಧೆ: ಆರೋಪಿಗಳ ವಿರುದ್ಧ ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಸ್ವರ್ಣಾ ನದಿಯ ಪಾತ್ರದಲ್ಲಿ ಹೂಳು ತೆಗೆಯುವ ನೆಪದಲ್ಲಿ ಮರಳು ತೆಗೆ‌ದ ಆರೋಪಿಗಳ ವಿರುದ್ಧ ಖಾಸಗಿ ಪ್ರಕರಣ ದಾಖಲಾಗಿದೆ. ನಾಲ್ಕು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಬ್ಬರು ಅಧಿಕಾರಿಗಳ ಅಮಾನತಿಗೆ ಶಿಫಾರಸು ಮಾಡಲಾಗಿದೆ. ಮರಳು ದಂಧೆಗೆ ಜಿಲ್ಲಾಡಳಿತ ಅವಕಾಶ ನೀಡುವುದಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸ್ವರ್ಣಾ ನದಿಯಲ್ಲಿ ಈಚೆಗೆ ಅಕ್ರಮವಾಗಿ ಮರಳು ತೆಗೆಯುತ್ತಿರುವ ಬಗ್ಗೆ ಸಲ್ಲಿಕೆಯಾದ ಖಾಸಗಿ ದೂರಿನ ಮೇಲೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಹಾಗೂ ಗಣಿ ಇಲಾಖೆ ಅಧಿಕಾರಿಗಳು ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಮರಳು ದಂಧೆಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಕುಮ್ಮಕ್ಕು ಇರುವ ಆರೋಪವಿದ್ದು ನಿಷ್ಪಕ್ಷಪಾತವಾಗಿ ತನಿಖೆ ನಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಒತ್ತಾಯಿಸಿದ್ದರು.

ಸೋಂಕಿತ ಮಕ್ಕಳ ಆರೋಗ್ಯ ಸ್ಥಿರ: ಗರ್ಭಿಣಿಯರಿಗೆ ಹಾಗೂ ಮಕ್ಕಳಿಗೆ ಸೋಂಕು ತಗುಲುವ ಅಪಾಯ ಹೆಚ್ಚಾಗಿರುವ ಕಾರಣದಿಂದ ಕ್ವಾರಂಟೈನ್‌ನಲ್ಲಿರುವ ಮಕ್ಕಳು ಹಾಗೂ ಗರ್ಭಿಣಿಯರನ್ನು ಆದ್ಯತೆ ಮೇಲೆ ಪರೀಕ್ಷೆಗೊಳಪಡಿಸಿದಾಗ 16 ಮಕ್ಕಳಲ್ಲಿ ಕೋವಿಡ್‌ ಸೋಂಕು ದೃಡಪಟ್ಟಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದರು.

ಸಾರ್ವಜನಿಕ ಸ್ಥಳಗಳಲ್ಲಿ ಅಂತರ ಕಾಯ್ದುಕೊಳ್ಳದವರ ವಿರುದ್ಧ ಈಗಾಗಲೇ ನಗರಸಭೆ ಕಾರ್ಯಾಚರಣೆ ನಡೆಸಿ ದಂಡ ಹಾಕುತ್ತಿದೆ. ಮುಂದೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು