ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಗೆಹರಿದ ಮರಳು ಸಮಸ್ಯೆ: ಇಂದಿನಿಂದಲೇ ಲೀಸ್‌

ಜಿಲ್ಲಾಧಿಕಾರಿ ನೇತೃತ್ವದ 7 ಸದಸ್ಯರ ಸಮಿತಿ ಸಭೆಯಲ್ಲಿ ನಿರ್ಧಾರ: ಶಾಸಕ ರಘುಪತಿ ಭಟ್‌
Last Updated 17 ಸೆಪ್ಟೆಂಬರ್ 2019, 16:23 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಕಳೆದ 2 ವರ್ಷಗಳಿಂದ ಕಗ್ಗಂಟಾಗಿದ್ದ ಮರಳಿನ ಸಮಸ್ಯೆ ಬಗೆಹರಿದಿದೆ. ಮಂಗಳವಾರ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ 7 ಸದಸ್ಯರ ಸಮಿತಿ ಸಭೆಯು ಜಿಲ್ಲೆಯ ಸಿಆರ್‌ಝೆಡ್ ವ್ಯಾಪ್ತಿಯಲ್ಲಿ ಮರಳು ದಿಬ್ಬಗಳ ತೆರವಿಗೆ ಅನುಮತಿ ನೀಡಿ ನಿರ್ಣಯ ತೆಗೆದುಕೊಂಡಿದೆ ಎಂದು ಶಾಸಕ ರಘುಪತಿ ಭಟ್‌ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ 158 ಪರವಾನಗಿದಾರರಿಗೆ ಮರಳು ತೆಗೆಯಲು ಅನುಮತಿ ಸಿಕ್ಕಿದೆ. ಬುಧವಾರದಿಂದಲೇ ಗಣಿ ಇಲಾಖೆ ಅಧಿಕಾರಿಗಳು ಗುತ್ತಿಗೆ ನೀಡುವ ಪ್ರಕ್ರಿಯೆ ಆರಂಭಿಸಲಿದ್ದಾರೆ. ಜಿಲ್ಲೆಯಲ್ಲಿ ಮರಳುಗಾರಿಕೆ ಆರಂಭಕ್ಕೆ ಸಹಕರ ನಿಡಿದ ಜಿಲ್ಲಾಧಿಕಾರಿ ಜಗದೀಶ್ ಅವರಿಗೆ, ಏಳು ಜನರ ಸಮಿತಿ ಸದಸ್ಯರಿಗೆ ಅಭಿನಂದನೆ ಸಲ್ಲಿಸುವುದಾಗಿ ಶಾಸಕರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT