ಕುಂದಾಪುರ: ‘ವ್ಯಕ್ತಿತ್ವದಲ್ಲಿ ತೃಪ್ತಿ ಎನ್ನುವ ಮೌಲ್ಯ ಅಳವಡಿಸಿಕೊಂಡರೆ ನೆಮ್ಮದಿಯ ಬದುಕು ನಡೆಸಲು ಸಾಧ್ಯವಾಗುತ್ತದೆ’ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಹೇಳಿದರು.

ಯಡಾಡಿ ಮತ್ಯಾಡಿಯ ಸುಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾನೂನು ಬರುವ ಮೊದಲೇ ಸಮಾಜದಲ್ಲಿ ಮೌಲ್ಯಗಳಿದ್ದವು. ಜನರು ಅದಕ್ಕೆ ಗೌರವ ನೀಡುತ್ತಿದ್ದರು. ಆದರೆ ಇಂದು ಸಮಾಜ ಬದಲಾಗಿದ್ದು, ಶ್ರೀಮಂತರಿಗೆ ಮಣೆ ಹಾಕುವ ಪ್ರವೃತ್ತಿ ತಾಂಡವವಾಡುತ್ತಿದೆ. ಪ್ರಾಮಾಣಿಕತೆಗೆ, ಪ್ರಾಮಾಣಿಕರಿಗೆ ಬೆಲೆ ಇಲ್ಲದ ಹಾಗಾಗಿದೆ. ಹಣದ ಮುಂದೆ ಪ್ರಾಮಾಣಿಕತೆ, ಮೌಲ್ಯ ಗೌಣವಾಗಿವೆ ಎಂದು ವಿಷಾದ ವ್ಯಕ್ತಪಡಿಸಿದರು.

ಕ್ರಾಂತಿ ಮೂಲಕ ಬದಲಾವಣೆ ಆದರೆ ದೇಶ ಒಡೆದು ಚೂರಾಗುತ್ತದೆ, ಶಾಂತಿ ಸೌಹಾರ್ದ ಮರೆಯಾಗುತ್ತದೆ. ನಾವು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಕಷ್ಟಕ್ಕೆ ಸ್ಪಂದಿಸುವ ಮನೋಭಾವ ಹೊಂದಿರಬೇಕು ಎಂದರು.

ಪ್ರಾಸ್ತಾವಿಕ ಮಾತನಾಡಿದ ಸುಜ್ಞಾನ ಎಜುಕೇಷನಲ್ ಟ್ರಸ್ಟ್ ಖಜಾಂಚಿ ಭರತ್ ಶೆಟ್ಟಿ, ಭ್ರಷ್ಟಾಚಾರ ಮುಕ್ತ ಸಮಾಜ ಕಟ್ಟುವುದಕ್ಕಾಗಿ ಯುವಕರನ್ನು ಸಿದ್ಧಪಡಿಸಬೇಕು ಎಂಬ ಪಣತೊಟ್ಟು ಸಂತೋಷ್ ಹೆಗ್ಡೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಈ ವಯಸ್ಸಿನಲ್ಲಿಯೂ ಅವರ ಉತ್ಸಾಹ, ದೇಶಪ್ರೇಮ, ಮುಂದಿನ ಪೀಳಿಗೆ ಬಗ್ಗೆ ಕಾಳಜಿ ಅನುಕರಣೀಯವಾದುದು ಎಂದರು.

ಸಂಸ್ಥೆಯ ಕಾರ್ಯದರ್ಶಿಯಾದ ಪ್ರತಾಪ್ಚಂದ್ರ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಸಂತೋಷ ಹೆಗ್ಡೆ ಅವರ ಜೀವನ ಮೌಲ್ಯ, ಅವರು ಪಾಲಿಸಿದ ತತ್ವಗಳನ್ನು ಅನುಸರಿಸಿದರೆ ನೆಮ್ಮದಿಯ ಬದುಕಿನೊಂದಿಗೆ ಸದೃಢ ದೇಶ ಕಟ್ಟಬಹುದು. ವಿದ್ಯಾರ್ಥಿಗಳು ತಪ್ಪು ತಿದ್ದಿಕೊಳ್ಳುವ ಗುಣ ಬೆಳೆಸಿಕೊಳ್ಳಬೇಕು ಎಂದರು.

ಸಂಸ್ಥೆಯ ಅಧ್ಯಕ್ಷ ಡಾ.ರಮೇಶ್ ಶೆಟ್ಟಿ ಶುಭ ಹಾರೈಸಿದರು. ಪ್ರಾಂಶುಪಾಲ ರಂಜನ್ ಬಿ. ಶೆಟ್ಟಿ ಭಾಗವಹಿಸಿದ್ದರು. ಇಂಗ್ಲಿಷ್ ವಿಭಾಗ ಮುಖ್ಯಸ್ಥ ವಿನಯ್ ಕುಮಾರ್ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.