ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಭ್ರಷ್ಟಾಚಾರವು ಸಮಾಜದ ಬಹುದೊಡ್ಡ ಪಿಡುಗು: ಸಂತೋಷ್ ಹೆಗ್ಡೆ

ವಿದ್ಯಾರ್ಥಿಗಳ ‘ಮಾರ್ಗದರ್ಶನ ಕಾರ್ಯಕ್ರಮ’ ಉದ್ಘಾಟನೆ
Published 1 ಸೆಪ್ಟೆಂಬರ್ 2024, 16:30 IST
Last Updated 1 ಸೆಪ್ಟೆಂಬರ್ 2024, 16:30 IST
ಅಕ್ಷರ ಗಾತ್ರ

ಶಿರ್ವ: ಭ್ರಷ್ಟಾಚಾರವು ಸಮಾಜದ ಬಹುದೊಡ್ಡ ಪಿಡುಗು. ಪ್ರತಿಯೊಬ್ಬ ನಾಗರೀಕನೂ ತಮ್ಮ ಸಂಪಾದನೆಯಲ್ಲೇ ತೃಪ್ತಿ ಪಡುವ ಮೂಲಕ ದುರಾಸೆಯಿಂದ ಮುಕ್ತರಾಗಿ ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣದಲ್ಲಿ ಕೈ ಜೋಡಿಸಬೇಕು ಎಂದು
ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಜಸ್ಟಿಸ್ ಸಂತೋಷ್ ಹೆಗ್ಡೆ ಹೇಳಿದರು.

ಬಂಟಕಲ್ಲು ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ 2024–25ನೇ ಸಾಲಿನ ಪ್ರಥಮ ವರ್ಷದ ಎಂಜಿನಿಯರಿಂಗ್ ಶಿಕ್ಷಣಕ್ಕೆ ಸೇರ್ಪಡೆಗೊಂಡ ವಿದ್ಯಾರ್ಥಿಗಳ ‘ಮಾರ್ಗದರ್ಶನ ಕಾರ್ಯಕ್ರಮ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಯುವಜನರು ತಮ್ಮನ್ನು ಬೇರೆಯವರೊಂದಿಗೆ ಹೋಲಿಕೆ ಮಾಡಿಕೊಳ್ಳುವ ಪ್ರವೃತ್ತಿಯಿಂದ ಹೊರಬರಬೇಕು ಹಾಗೂ ಜೀವನದಲ್ಲಿ ಮಾನವೀಯ ಮೌಲ್ಯ ಅಳವಡಿಸಿಕೊಳ್ಳಬೇಕು’ ಎಂದರು.

ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನದ ಉಪಾಧ್ಯಕ್ಷ ಪಿ.ಶ್ರೀನಿವಾಸ ತಂತ್ರಿ ಅಧ್ಯಕ್ಷತೆ ವಹಿಸಿದ್ದರು.

ಡೀನ್ ಅಕಾಡೆಮಿಕ್ ಡಾ. ನಾಗರಾಜ ಭಟ್, ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ ಸಂಸ್ಥೆಯ ನಿಯಮಗಳ ಕುರಿತು ಮಾಹಿತಿ ನೀಡಿದರು.

ಸಂಸ್ಥೆಯ ಕಾರ್ಯದರ್ಶಿಗಳಾದ ರತ್ನಕುಮಾರ್ ಮಾತನಾಡಿ, ಸಂಸ್ಥೆಯು ಕಳೆದ 14 ವರ್ಷದಿಂದ ನಡೆದು ಬಂದ ಹಾದಿಯನ್ನು ಮೆಲಕು ಹಾಕಿದರು. ವಿದ್ಯಾರ್ಥಿಗಳು ಉತ್ತಮ ವಿದ್ಯಾರ್ಜನೆಯಲ್ಲಿ ತೊಡಗಿಸಿಕೊಳ್ಳಲು ತೆಗೆದುಕೊಳ್ಳಬೇಕಾದ ಅಗತ್ಯ ಕ್ರಮಗಳನ್ನು ತಿಳಿಸಿದರು.

ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾದ ಹರೀಶ್ ಬೆಳ್ಮಣ್, ಸಂಸ್ಥೆಯ ಉಪ ಪ್ರಾಂಶುಪಾಲ ಗಣೇಶ್ ಐತಾಳ್ ಇದ್ದರು. ಸಂಸ್ಥೆಯ ಪ್ರಾಂಶುಪಾಲ ತಿರುಮಲೇಶ್ವರ ಭಟ್ ಸ್ವಾಗತಿಸಿದರು. ಗಣಿತ ಶಾಸ್ತ್ರ ವಿಭಾಗದ ಮುಖ್ಯಸ್ಥ ಲೊಲಿಟಾ ಪ್ರಿಯ ಕ್ಯಾಸ್ಥಲಿನೊ ಅತಿಥಿಗಳನ್ನು ಪರಿಚಯಿಸಿದರು. ಪ್ರಾಧ್ಯಾಪಕರಾದ ಪ್ರೀತಿ ಮತ್ತು ಸಚಿನ್ ಪ್ರಭು ನಿರೂಪಿಸಿದರು. ಪ್ರಥಮ ವರ್ಷದ ಎಂಜಿನಿಯರಿಂಗ್ ವಿಭಾಗದ ಸಂಯೋಜಕಿ ದೀಪಿಕಾ ಬಿ.ವಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT