ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೇ 40ರಷ್ಟು ಕಮಿಷನ್: ಈಶ್ವರಪ್ಪ ವಿರುದ್ಧ ಆರೋಪ ಮಾಡಿದ್ದ ಸಂತೋಷ ಪಾಟೀಲ ಆತ್ಮಹತ್ಯೆ

Last Updated 12 ಏಪ್ರಿಲ್ 2022, 7:28 IST
ಅಕ್ಷರ ಗಾತ್ರ

ಉಡುಪಿ: ಗ್ರಾಮೀಣಾಭಿವೃದ್ಧಿಹಾಗೂ ಪಂಚಾಯತ್‌ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಈಚೆಗೆ ಶೇ 40ರಷ್ಟು ಪರ್ಸೆಂಟೇಜ್ ಆರೋಪ ಮಾಡಿ ಸುದ್ದಿಯಾಗಿದ್ದ ಬೆಳಗಾವಿ ಜಿಲ್ಲೆ ಹಿಂಡಲಗಾ ಗ್ರಾಮದ ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತರೂ ಆಗಿರುವ ಸಂತೋಷ್ ಪಾಟೀಲ‌ ಉಡುಪಿಯ ಶಾಂಭವಿ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಾಟ್ಸ್ ಆ್ಯಪ್ ಸಂದೇಶ ಕಳುಹಿಸಿ ನಾಪತ್ತೆಯಾಗಿದ್ದ ಸಂತೋಷ್ ಪಾಟೀಲ ಇಲ್ಲಿನ
ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪದ ಶಾಂಭವಿ ಲಾಡ್ಜ್‌ನಲ್ಲಿ ಉಳಿದುಕೊಂಡಿದ್ದರು. ಅವರ ಮೊಬೈಲ್ ಲೊಕೇಷನ್ ಆಧಾರದ ಮೇಲೆ ಲಾಡ್ಜ್‌ಗಳಲ್ಲಿ ತಪಾಸಣೆ ನಡೆಸಿದಾಗ ಶಾಂಭವಿ ಲಾಡ್ಜ್‌ನಲ್ಲಿ ಸಂತೋಷ್ ಪಾಟೀಲ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.


ಸಂತೋಷ್ ಪಾಟೀಲ ‘ನನ್ನ ಸಾವಿಗೆ ಸಚಿವ ಕೆ.ಎಸ್. ಈಶ್ವರಪ್ಪ ಕಾರಣ’. ಸಚಿವರಿಗೆ ಶಿಕ್ಷೆಯಾಗಬೇಕು. ನನ್ನೆಲ್ಲ ಆಸೆ ಬದಿಗೊತ್ತಿ ಆತ್ಮಹತ್ಯೆ ನಿರ್ಧಾರ ಮಾಡಿದ್ದೇನೆ. ನನ್ನ ಹೆಂಡತಿ, ಮಕ್ಕಳಿಗೆ ಪ್ರಧಾನಿ, ಮುಖ್ಯಮಂತ್ರಿ , ಬಿ.ಎಸ್. ಯಡಿಯೂರಪ್ಪ ಸಹಾಯ ಮಾಡಬೇಕು' ಎಂದು ಬರೆದಿದ್ದಾರೆ ಎನ್ನಲಾದ ಸಂದೇಶ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT