ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: ಚಂದ್ರಶೇಖರ್‌ಗೆ ಸರ್ವೋತ್ತಮ ಸೇವಾ ಪ್ರಶಸ್ತಿ

Last Updated 24 ಏಪ್ರಿಲ್ 2021, 17:08 IST
ಅಕ್ಷರ ಗಾತ್ರ

ಉಡುಪಿ: ಕೃಷಿ ಇಲಾಖೆ ಉಪ ನಿರ್ದೇಶಕರಾದ ಚಂದ್ರಶೇಖರ್ ನಾಯಕ್ ಅವರನ್ನು 2020–21ನೇ ಸಾಲಿನ ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ವಿವಿಧ ಇಲಾಖೆಗಳಲ್ಲಿ ಅತ್ಯುನ್ನತ ಸಾಧನೆ ಮಾಡಿದ ರಾಜ್ಯದ 10 ಅಧಿಕಾರಿಗಳನ್ನು ಸರ್ವೋತ್ತಮ ಸೇವಾ ಪ್ರಶಸ್ತಿ ಆಯ್ಕೆ ಮಾಡಲಾಗಿದ್ದು, ಅವರಲ್ಲಿ ಚಂದ್ರಶೇಖರ ನಾಯಕ್ ಕೂಡ ಒಬ್ಬರು. ಪ್ರಸ್ತಿಯು ₹ 25,000 ಪ್ರೋತ್ಸಾಹ ಧನ ಹಾಗೂ ಪ್ರಶಸ್ತಿ ಪ್ರಮಾಣ ಪತ್ರ ಒಳಗೊಂಡಿದೆ.

ಚಂದ್ರಶೇಖರ್ ನಾಯಕ್‌ 2003 ರಿಂದ 2006 ರವರೆಗೆ ಪುತ್ತೂರಿನಲ್ಲಿ ಕೃಷಿ ಇಲಾಖೆ ಸಹಾಯಕ ನಿರ್ದೇಶಕರಾಗಿದ್ದು. ಬಳಿಕ 2006 ರಿಂದ 9ರವರೆಗೆ ಭಟ್ಕಳದಲ್ಲಿ, 2009ರಿಂದ 13ರವರೆಗೆ ಮುಂಡಗೋಡದಲ್ಲಿ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಬಳಿಕ ಬಡ್ತಿಹೊಂದಿ ಬೆಳಗಾವಿಯಲ್ಲಿ ಫರ್ಟಿಲೈಸರ್‌ ಕಂಟ್ರೋಲ್ ಪ್ರಯೋಗಾಲಯದಲ್ಲಿ ಉಪ ನಿರ್ದೇಶರಾಗಿ ಕರ್ತವ್ಯ ನಿರ್ವಹಿಸಿ, ನಂತರ 2013ರ ಸೆಪ್ಟೆಂಬರ್‌ನಿಂದ ಉಡುಪಿ ಜಿಲ್ಲೆಯಲ್ಲಿ ಕೃಷಿ ಇಲಾಖೆಯ ಉಪ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

‘ಸರ್ವೋತ್ತಮ ಸೇವಾ ಪ್ರಶಸ್ತಿ ಮತ್ತಷ್ಟು ಜವಾಬ್ದಾರಿ ಹೆಚ್ಚಿಸಿದೆ. ಕೃಷಿ ಇಲಾಖೆ ಕಾರ್ಯಕ್ರಮಗಳನ್ನು ರೈತರಿಗೆ ತಲುಪಿಸುವ ನಿಟ್ಟಿನಲ್ಲಿ ಮತ್ತಷ್ಟು ಶ್ರಮವಹಿಸುವುದಾಗಿ’ ಚಂದ್ರಶೇಖರ್ ನಾಯಕ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ಸಚಿವರಿಂದ ಅಭಿನಂದನೆ:

ಚಂದ್ರಶೇಖರ್ ನಾಯಕ್ ಅವರಿಗೆ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅಭಿನಂದಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಕುಮಟಾ ಮೂಲದ ಚಂದ್ರಶೇಖರ್, ಶಿರಸಿ, ಭಟ್ಕಳದಲ್ಲಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಉತ್ತಮ ಸೇವೆ ನೀಡಿದ್ದಾರೆ. ಭವಿಷ್ಯದಲ್ಲಿ ಇನ್ನಷ್ಟು ಜನಸೇವೆ ಮಾಡಲಿ ಎಂದು ಹಾರೈಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT