ಸೋಮವಾರ, ಸೆಪ್ಟೆಂಬರ್ 26, 2022
20 °C

ಸಾವರ್ಕರ್ ಫ್ಲೆಕ್ಸ್‌ಗೆ ಕಾಂಗ್ರೆಸ್‌ ಆಕ್ಷೇಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ನಗರದ ಹೃದಯ ಭಾಗದಲ್ಲಿರುವ ಬ್ರಹ್ಮಗಿರಿಯ ವೃತ್ತದಲ್ಲಿ ಸಾವರ್ಕರ್‌ ಫ್ಲೆಕ್ಸ್‌ ಅಳವಡಿಕೆಗೆ ಕಾಂಗ್ರೆಸ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಮಂಗಳವಾರ ಫ್ಲೆಕ್ಸ್‌ ಹಾಕಿರುವ ಸ್ಥಳಕ್ಕೆ ಭೇಟಿನೀಡಿದ ಮುಖಂಡರು ಸಾರ್ವಜನಿಕ ಸ್ಥಳಗಳಲ್ಲಿ ವಿವಾದಾತ್ಮಕ ವ್ಯಕ್ತಿಗಳ ಫ್ಲೆಕ್ಸ್‌ ಹಾಕಿದರೆ ಶಾಂತಿಗೆ ಭಂಗ ಉಂಟಾಗುವ ಸಾದ್ಯತೆಗಳಿದ್ದು ಕೂಡಲೇ ತೆರವುಗೊಳಿಸಬೇಕು ಎಂದು ಆಗ್ರಹಿಸಿದರು.

ಬಳಿಕ ಉಡುಪಿ ನಗರಸಭೆ ಕಚೇರಿಗೆ ತೆರಳಿ ಫ್ಲೆಕ್ಸ್‌ಗಳ ತೆರವಿಗೆ ಮನವಿ ಸಲ್ಲಿಸಿದರು. ಈ ಸಂದರ್ಭ ಪ್ರಖ್ಯಾತ್ ಶೆಟ್ಟಿ, ಯತೀಶ್ ಕರ್ಕೆರಾ ಸೇರಿದಂತೆ ಹಲವರು ಮುಖಂಡರು ಇದ್ದರು.

ದೇಶದಲ್ಲಿ ಎಲ್ಲ ಜಾತಿ ಧರ್ಮಗಳ ಜನರು ಶಾಂತಿ, ಸಹಬಾಳ್ವೆಯಿಂದ ಇರಬೇಕು. ಆದರೆ, ಕೆಲವರು ಸಮಾಜದಲ್ಲಿ ಪ್ರಚೋದಾತ್ಮಕ ಕಾರ್ಯಕ್ಕೆ ಮುಂದಾಗುತ್ತಿರುವುದು ಖಂಡನೀಯ. ಹಿಂದೂ ರಾಷ್ಟ್ರವನ್ನಾಗಿ ಮಾಡುವುದಾಗಿ ಫ್ಲೆಕ್ಸ್‌ ಹಾಕಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಸಹಬಾಳ್ವೆ ಸಂಘಟನೆಯ ಅಮೃತ್ ಶೆಣೈ ಒತ್ತಾಯಿಸಿದ್ದಾರೆ.

ಶಿವಮೊಗ್ಗದಲ್ಲಿ ನಡೆದ ಅಹಿತಕರ ಘಟನೆ ಬೆನ್ನಲ್ಲೇ ಉಡುಪಿಯಲ್ಲಿ ನಾಕಾಬಂದಿ ಹಾಕಲಾಗಿದ್ದು, ವಾಹನಗಳ ತಪಾಸಣೆ ನಡೆಯುತ್ತಿದೆ. ಸಾವರ್ಕರ್ ಫ್ಲೆಕ್ಸ್‌ ಹಾಕಿರುವ ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

 
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು