ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕನ್ನಡ ಭಾಷೆ, ಸಾಹಿತ್ಯ ಪರಂಪರೆ ಉಳಿಸಿ: ಪ್ರಜ್ಞಾ ಮಾರ್ಪಳ್ಳಿ

ಪ್ರಬಂಧ ಸ್ಫರ್ಧೆ ವಿಜೇತರ ಬಹುಮಾನ ವಿತರಣೆ
Published : 25 ಆಗಸ್ಟ್ 2024, 5:04 IST
Last Updated : 25 ಆಗಸ್ಟ್ 2024, 5:04 IST
ಫಾಲೋ ಮಾಡಿ
Comments

ಶಿರ್ವ: ಕನ್ನಡ ಭಾಷೆಗೆ 2,500 ವರ್ಷಗಳ ಪರಂಪರೆ ಇದೆ. ಭಾಷಾ ಸಾಹಿತ್ಯವು ಹಳೆಗನ್ನಡ, ನಡುಗನ್ನಡ , ಹೊಸಗನ್ನಡ ಹೀಗೆ ಮೂರು ಹಂತಗಳಲ್ಲಿ ಬೆಳೆದ ಭವ್ಯ ಇತಿಹಾಸವನ್ನು ಹೊಂದಿದೆ. ಇದನ್ನು ಉಳಿಸಿ ಬೆಳೆಸಬೇಕಾದರೆ ಮಕ್ಕಳಲ್ಲಿ ಭಾಷಾ ಸಾಹಿತ್ಯವನ್ನು ಓದುವ ಆಸಕ್ತಿ ಬೆಳೆಸಬೇಕು ಎಂದು ಉಡುಪಿ ಪೂರ್ಣಪ್ರಜ್ಞಾ ಸಂಧ್ಯಾ ಕಾಲೇಜಿನ ಉಪನ್ಯಾಸಕಿ ಪ್ರಜ್ಞಾ ಮಾರ್ಪಳ್ಳಿ ಅಭಿಪ್ರಾಯಪಟ್ಟರು.

ಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕಾಪು ತಾಲ್ಲೂಕು ಘಟಕದ ವತಿಯಿಂದ ಕಟಪಾಡಿ ಎಸ್‌ವಿಎಸ್ ಪ.ಪೂ.ಕಾಲೇಜಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಪ್ರಬಂಧ ಸ್ಫರ್ಧೆ ವಿಜೇತರ ಬಹುಮಾನ ವಿತರಣಾ ಸಮಾರಂಭದಲ್ಲಿ ಅವರು ಉಪನ್ಯಾಸ ನೀಡಿದರು.

ಕನ್ನಡ ಸಾಹಿತ್ಯ ಪರಂಪರೆಯನ್ನು ಮುಂದಿನ ಸಮಾಜಕ್ಕೆ ನೀಡುವ ಗುರುತರ ಹೊಣೆ ವಿದ್ಯಾರ್ಥಿಗಳ ಮೇಲಿದೆ. ಪರಂಪರೆಯ ಬಗ್ಗೆ ಪುಸ್ತಕಗಳನ್ನು ಓದುವ ಮೂಲಕ ಭವಿಷ್ಯದ ಸಾಹಿತಿಗಳಾಗಿ ಬೆಳೆಯಬೇಕು ಎಂದರು.

ಕಸಾಪ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಮಕ್ಕಳಲ್ಲಿ ಸಾಹಿತ್ಯಾಭಿರುಚಿ ಬೆಳೆಸುವ ಬಗ್ಗೆ ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕಟಪಾಡಿ ಎಸ್‌ವಿಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ.ಸತ್ಯೇಂದ್ರ ಪೈ ವಿಜೇತರಿಗೆ ಬಹುಮಾನ ವಿತರಿಸಿದರು.

ಕಸಾಪ ಕಾಪು ತಾಲ್ಲೂಕು ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಭಾಷಾ ಶಿಕ್ಷಕಿ ವಿದ್ಯಾ ಟೀಚರ್‌ ಅವರನ್ನು ಅಭಿನಂದಿಸಲಾಯಿತು. ನಿವೃತ್ತ ಎಂಜಿನಿಯರ್ ಉಮೇಶ್ ರಾವ್, ಕಟಪಾಡಿ ಪ್ರೇರಣಾ ಟ್ರಸ್ಟ್ ಸಂಚಾಲಕ ಕೆ.ರಾಘವೇಂದ್ರ ರಾವ್, ಕಸಾಪ ತಾಲ್ಲೂಕು ಘಟಕದ ಸದಸ್ಯರಾದ ಎಸ್.ಎಸ್.ಪ್ರಸಾದ್, ಡೋಮಿಯನ್ ಆರ್ ನೊರೋನ್ಹ ಇದ್ದರು.

ಎಸ್‌ವಿಎಸ್ ಪ್ರೌಢಶಾಲಾ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ತಂತ್ರಿ ಸ್ವಾಗತಿಸಿದರು. ಕಾರ್ಯಕ್ರಮದ ಸಂಘಟಕ ಕೃಷ್ಣಕುಮಾರ್ ರಾವ್ ಮಟ್ಟು ನಿರೂಪಿಸಿದರು. ನಿವೃತ್ತ ಪ್ರಾಂಶುಪಾಲ ಅನಂತ ಮೂಡಿತ್ತಾಯ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT