ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ಸಮರ್ಪಣಾ ಭಾವದಿಂದ ಜೀವನದಲ್ಲಿ ಸಾಧನೆ‌’

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
Published : 1 ಸೆಪ್ಟೆಂಬರ್ 2024, 3:09 IST
Last Updated : 1 ಸೆಪ್ಟೆಂಬರ್ 2024, 3:09 IST
ಫಾಲೋ ಮಾಡಿ
Comments

ಉಡುಪಿ: ಕಠಿಣ ಪರಿಶ್ರಮ, ಧೈರ್ಯ, ಕಾಳಜಿ ಮತ್ತು ಸಮರ್ಪಣಾ ಭಾವದಿಂದ ಜೀವನದಲ್ಲಿ ಎಲ್ಲವನ್ನೂ ಸಾಧಿಸಬಹುದು. ಪ್ರೀತಿ ಮತ್ತು ಪ್ರಯತ್ನವು ಶ್ರೇಷ್ಟತೆಗೆ ಕಾರಣವಾಗುತ್ತದೆ ಎಂದು ಧಾರವಾಡದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ನಿರಂಜನ್ ಕುಮಾರ್‌ ಹೇಳಿದರು.

ನಗರದ ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಭಾವಪ್ರಕಾಶ ಸಭಾಂಗಣದಲ್ಲಿ ಶನಿವಾರ ‘ವಿಶಿಖಾನುಪ್ರವೇಶ’ ಪದವಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಮಾತನಾಡಿ, ಆಯುರ್ವೇದ ಜ್ಞಾನ, ಕೌಶಲ ಮತ್ತು ಮಾನವೀಯ ಮೌಲ್ಯಗಳೊಂದಿಗೆ ತಮ್ಮ ವೃತ್ತಿಯಲ್ಲಿ ತೊಡಗುವಂತೆ ವಿದ್ಯಾರ್ಥಿಗಳಿಗೆ ಸಂದೇಶ ನೀಡಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಮಮತಾ ಕೆ.ವಿ.ಮಾತನಾಡಿ, ಯಶಸ್ವಿಯಾಗಿ ಪದವಿಯನ್ನು ಪೂರೈಸಿದ ವಿದ್ಯಾರ್ಥಿಗಳನ್ನು ಶ್ಲಾಘಿಸಿದರು.

ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನ ಹಳೆವಿದ್ಯಾರ್ಥಿ ಸಂಘದ ವತಿಯಿಂದ ಸ್ನಾತಕ ವಿದ್ಯಾರ್ಥಿಯಾದ ಡಾ. ವಿನಾಯಕ ಜೋಯಿಸ್‍ರವರಿಗೆ ಅತ್ಯುತ್ತಮ ವಿದ್ಯಾರ್ಥಿಯೆಂದು ಚಿನ್ನದ ಪದಕವನ್ನು ನೀಡಲಾಯಿತು.

ಕಾಲೇಜಿನ ಆಡಳಿತ ಮುಖ್ಯಾಧಿಕಾರಿ ಡಾ. ವೀರಕುಮಾರ ಕೆ. ಅವರು 76 ಸ್ನಾತಕ ಮತ್ತು 48 ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಕಾಲೇಜಿನ ಸ್ನಾತಕೋತ್ತರ ವಿಭಾಗದ ಡೀನ್ ಡಾ. ಅಶೋಕ್ ಕುಮಾರ್ ಬಿ.ಎನ್. ಹಾಗೂ ಸ್ನಾತಕ ವಿಭಾಗದ ಡೀನ್ ಡಾ. ರಜನೀಶ್ ವಿ. ಗಿರಿ ವಿದ್ಯಾರ್ಥಿಗಳನ್ನು ಪದವಿ ಪತ್ರವನ್ನು ಪಡೆಯಲು ಆಹ್ವಾನಿಸಿದರು.

ಶೈಕ್ಷಣಿಕ ವಿಭಾಗದ ಮುಖ್ಯಸ್ಥರಾದ ಡಾ. ಶ್ರೀಲತಾ ಕಾಮತ್ ಉಪಸ್ಥಿತರಿದ್ದರು. ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ನಾಗರಾಜ್ ಎಸ್. ವಂದಿಸಿ, ಸಹಾಯಕ ಪ್ರಾಧ್ಯಾಪಕರಾದ ಡಾ. ಅರುಣ್ ಕುಮಾರ್ ಮತ್ತು ಡಾ. ಲಿಖಿತಾ ಡಿ.ಎನ್. ಕಾರ್ಯಕ್ರಮವನ್ನು ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT