ಶನಿವಾರ, 25 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: ಪ್ರಜ್ವಲ್ ಬಂಧನಕ್ಕೆ ಒತ್ತಾಯಿಸಿ ಎಸ್‌ಡಿಪಿಐ ಪ್ರತಿಭಟನೆ

Published 10 ಮೇ 2024, 14:06 IST
Last Updated 10 ಮೇ 2024, 14:06 IST
ಅಕ್ಷರ ಗಾತ್ರ

ಉಡುಪಿ: ಹಾಸನ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಶುಕ್ರವಾರ ಇಲ್ಲಿನ ಅಜ್ಜರಕಾಡು ಹುತಾತ್ಮರ ಸ್ಮಾರಕದ ಬಳಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯ ರಿಯಾಜ್ ಕಡಂಬು, ಲವ್ ಜಿಹಾದ್ ಎಂದು ಭಾಷಣ ಬಿಗಿಯುವ ಬಿಜೆಪಿ ಮತ್ತು ಸಂಘ ಪರಿವಾರದ ನಾಯಕರು ಪ್ರಜ್ವಲ್ ರೇವಣ್ಣ ಮಹಿಳೆಯರ ಮಾನ ಹರಾಜು ಮಾಡಿದಾಗ ಯಾಕೆ ತುಟಿ ಬಿಚ್ಚುತ್ತಿಲ್ಲ ಎಂದು ಪ್ರಶ್ನಿಸಿದರು.

ಉಡುಪಿ ಕಾಲೇಜಿನ ಸಣ್ಣ ಘಟನೆಯನ್ನು ದೊಡ್ಡ ವಿವಾದವಾಗಿ ಬಿಂಬಿಸಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿದ ಶಾಸಕ ಯಶಪಾಲ್ ಸುವರ್ಣ ಅವರು ಪ್ರಜ್ವಲ್ ರೇವಣ್ಣ ವಿಷಯದಲ್ಲಿ ಒಂದು ಮಾತೂ ಆಡದಿರುವುದನ್ನು ನೋಡಿದರೆ, ಹಿಂದೂಗಳ ಮೇಲಿನ ಅವರ ಕಾಳಜಿ ಕೇವಲ ರಾಜಕೀಯ ಲಾಭಕ್ಕಾಗಿ ಮಾತ್ರ ಎನ್ನುವ ಭಾವನೆ ಮೂಡುತ್ತದೆ ಎಂದು ಅವರು ಆರೋಪಿಸಿದರು.

ಎಸ್‌ಡಿಪಿಐ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಶಾಹಿದ್ ಆಲಿ ಹಾಗೂ ಎಸ್‌ಡಿಪಿಐ ಕಾಪು ಕ್ಷೇತ್ರ ಸಮಿತಿ ಅಧ್ಯಕ್ಷ ಹನೀಫ್ ಮೂಲೂರ್ ಮಾತನಾಡಿದರು. ವಿಮೆನ್ ಇಂಡಿಯಾ ಮೂವ್ಮೆಂಟ್ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷೆ ನಾಜಿಯಾ ನಸ್ರುಲ್ಲಾ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT