ಮಂಗಳವಾರ, ಸೆಪ್ಟೆಂಬರ್ 29, 2020
21 °C

ಕಳೆದ ವರ್ಷದ ಅತಿವೃಷ್ಟಿ ಅನಾಹುತ ಮರುಕಳಿಸದಂತೆ ಎಚ್ಚರ: ಆರ್.ಅಶೋಕ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಕಳೆದ ವರ್ಷದ ಅತಿವೃಷ್ಟಿ ಅನಾಹುತಗಳು ಈ ವರ್ಷ ಮರುಕಳಿಸದಂತೆ ರಾಜ್ಯ ಸರ್ಕಾರ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ್ ತಿಳಿಸಿದರು.

ಪಡುಬಿದ್ರಿ ಬೀಚ್‌ನ ಕಡಲ್ಕೊರೆತ ಪ್ರದೇಶಕ್ಕೆ ಶುಕ್ರವಾರ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ನೆರೆ ಸಂದರ್ಭ ರಕ್ಷಣಾ ಕಾರ್ಯಾಚರಣೆಗೆ ಅಗತ್ಯ ಪರಿಕರಗಳ ಖರೀದಿಗೆ ಅಗ್ನಿಶಾಮಕ ದಳಕ್ಕೆ ₹ 20 ಕೋಟಿ ಬಿಡುಗಡೆ ಮಾಡಲಾಗಿದೆ. ಪೊಲೀಸ್‌, ಕಂದಾಯ ಹಾಗೂ ಅಗ್ನಿಶಾಮಕ ದಳ ಒಟ್ಟಾಗಿ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲಿದೆ ಎಂದು ತಿಳಿಸಿದರು.

ಉಸ್ತುವಾರಿ ಸಚಿವರು ತಕ್ಷಣ ಉಸ್ತುವಾರಿ ಜಿಲ್ಲೆಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಕೊಡುಗು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಅತಿವೃಷ್ಟಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಸಚಿವರು ತಿಳಿಸಿದರು.

ಪಡುಬಿದ್ರಿ ಬೀಚ್‌ನಲ್ಲಿ ಶಾಶ್ವತ ತಡೆಗೋಡೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ ಎನ್‌ಡಿಆರ್‌ಎಫ್‌ ನಿಧಿಯಿಂದ ಹಣ ಬಿಡುಗಡೆ ಮಾಡಲಾಗುವುದು. ಜಿಲ್ಲೆಯ ಪ್ರಾಕೃತಿಕ ವಿಕೋಪ ಪರಿಹಾರ ನಿಧಿಯಲ್ಲಿ ₹ 3.5 ಕೋಟಿ ಹಣವಿದ್ದು, ಹೆಚ್ಚುವರಿಯಾಗಿ ₹ 5 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು