ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: ದ್ವಿತೀಯ ಪಿಯುಸಿ ಪರೀಕ್ಷೆಯ ಪ್ರವೇಶ ಪತ್ರ ಪಡೆಯದ 6 ವಿದ್ಯಾರ್ಥಿನಿಯರು

Last Updated 21 ಏಪ್ರಿಲ್ 2022, 14:35 IST
ಅಕ್ಷರ ಗಾತ್ರ

ಉಡುಪಿ: ಹಿಜಾಬ್‌ಗಾಗಿ ಹೋರಾಟ ನಡೆಸುತ್ತಿರುವ ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ 6 ವಿದ್ಯಾರ್ಥಿನಿಯರು ದ್ವಿತೀಯ ಪಿಯುಸಿ ಪರೀಕ್ಷೆಗೆ ಪ್ರವೇಶ ಪತ್ರ ಪಡೆದುಕೊಂಡಿಲ್ಲ ಎಂದು ಕಾಲೇಜಿನ ಪ್ರಾಂಶುಪಾಲ ರುದ್ರೇಗೌಡ ತಿಳಿಸಿದರು.

ಏ.22ರಿಂದ ಪಿಯುಸಿ ಪರೀಕ್ಷೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಪ್ರವೇಶ ಪತ್ರ ಪಡೆದುಕೊಳ್ಳುವಂತೆ ಮುಂಚಿತವಾಗಿ ವಿದ್ಯಾರ್ಥಿನಿಯರಿಗೆ ಸೂಚಿಸಲಾಗಿತ್ತು. ಆದರೆ, ಅವರಿಂದ ಸ್ಪಂದನ ಸಿಗಲಿಲ್ಲ ಎಂದು ತಿಳಿಸಿದರು.

ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಶುಕ್ರವಾರ ಪರೀಕ್ಷೆ ಆರಂಭವಾಗುವ ಮುನ್ನ ಬಂದರೂ ಪ್ರವೇಶ ಪತ್ರ ನೀಡುವುದಾಗಿ ಪ್ರಾಂಶುಪಾಲರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT