ಬ್ರಹ್ಮಾವರ: ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳಿಂದ ಸಮಾಜ ಮತ್ತು ಮಹಿಳೆಯರಲ್ಲಿ ಹೆಚ್ಚಿನ ಶಕ್ತಿ ಬಂದಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಸಾಲಿಗ್ರಾಮ ಚೇಂಪಿಯ ವಿಶ್ವಕರ್ಮ ಸಾಂಸ್ಕೃತಿಕ ಸಭಾಭವನದಲ್ಲಿ ಭಾನುವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಾಂಡೇಶ್ವರ ವಲಯದ ವತಿಯಿಂದ ನಡೆದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಯೋಜನೆಯ ಹಲವಾರು ಜನಪರ ಯೋಜನೆಗಳು ಜನರ ಆರ್ಥಿಕ ಸ್ಥಿತಿ ಬಲ ಪಡಿಸಿದೆ. ಹಾಗೂ ಧಾರ್ಮಿಕ ಪ್ರಜ್ಞೆಯನ್ನು ಮೂಡಿಸಿದೆ ಎಂದು ಹೇಳಿದರು.

ಬ್ರಹ್ಮಾವರ ತಾಲ್ಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ನ ಅಧ್ಯಕ್ಷ ಪ್ರಕಾಶ ಶೆಟ್ಟಿ ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆ ಸಮಾಜದ ಒಳಿತಿಗಾಗಿರುವ ಕಲ್ಪವೃಕ್ಷ. ಮಧ್ಯವರ್ಜನ, ಸ್ವಾಸ್ತ್ಯ ಸಂಕಲ್ಪ ಶಿಬಿರಗಳು ಉತ್ತಮ ಸಮಾಜವನ್ನು ನಿರ್ಮಿಸುತ್ತಿದೆ. ಯೋಜನೆ ನಾಯಕತ್ವ ಗುಣಗಳನ್ನು ಬೆಳೆಸಿದೆ ಎಂದರು.

ಪಾಂಡೇಶ್ವರ ವಲಯ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ರಾಧಾ ಎಸ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.

ಬಾರ್ಕೂರು ಕೂಡ್ಲಿ ದೇವಸ್ಥಾನದ ಶ್ರೀನಿವಾಸ ಉಡುಪ, ಸಾಸ್ತಾನ ಪಾಂಡೇಶ್ವರ ರಕ್ತೇಶ್ವರಿ ದೇವಸ್ಥಾನದ ಧರ್ಮದರ್ಶಿ ರಮೇಶ ರಾವ್, ಅಚ್ಚುತ ಪೂಜಾರಿ, ಅಧ್ಯಕ್ಷ ಪ್ರತಾಪ್ ಶೆಟ್ಟಿ, ಸಾಲಿಗ್ರಾಮ ಚೇಂಪಿಯ ವಿಶ್ವಜ್ಯೋತಿ ಮಹಿಳಾ ಬಳಗದ ಅಧ್ಯಕ್ಷೆ ರಮ್ಯಾ ರಮೇಶ ಆಚಾರ್ಯ, ಕೋಟ ವಿರಾಡಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘದ ಅಧ್ಯಕ್ಷ ಸುಬ್ರಾಯ ಆಚಾರ್ಯ, ಶೌರ್ಯ ಟೀಮ್ನ ಕಾಳಿಂಗ ಪೂಜಾರಿ, ಯೋಜನೆಯ ಬ್ರಹ್ಮಾವರ ತಾಲ್ಲೂಕಿನ ಮೇಲ್ವಿಚಾರಕ ರಮೇಶ ಪಿ.ಕೆ, ಗಿರಿಜ ಶೇಖರ ಪೂಜಾರಿ ಇದ್ದರು.

ಇದೇ ಸಂದರ್ಭ ಗುಂಡ್ಮಿ, ಐರೋಡಿ, ಕಾವಡಿ, ಕೋಡಿ, ಪಡುಬೈಲು, ಕಾರ್ಕಡ, ಸಾಸ್ತಾನ, ಯಡಬೆಟ್ಟು ಸಂಘಗಳ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳಿಗೆ ಪದಗ್ರಹಣ ಸಮಾರಂಭ ನಡೆಯಿತು. ಆಯ್ದ ಫಲಾನುಭವಿಗಳಿಗೆ ಸುಜ್ಞಾನ ನಿಧಿ ವಿತರಿಸಲಾಯಿತು. ಪಾಂಡೇಶ್ವರ ವಲಯದ ಶೌರ್ಯ ತಂಡದವರನ್ನು ಗುರುತಿಸಲಾಯಿತು.

ಯೋಜನೆಯ ಕೃಷಿ ಅಧಿಕಾರಿ ರಾಘವೇಂದ್ರ ಸ್ವಾಗತಿಸಿದರು. ವಲಯ ಮೇಲ್ವಿಚಾರಕಿ ಜಯಲಕ್ಷ್ಮಿ ವರದಿ ವಾಚಿಸಿದರು. ಸೇವಾ ಪ್ರತಿನಿಧಿ ಶೋಭಾ ವಂದಿಸಿದರು. ಸುಜಾತ ಬಾಯರಿ ಕಾರ್ಯಕ್ರಮ ನಿರೂಪಿಸಿದರು.

ಕಲೆ ಶಿಕ್ಷಣ ಸಾಹಿತ್ಯ ಸಂಸ್ಕೃತಿ ಧಾರ್ಮಿಕ ಕಾರ್ಯಕ್ರಮ ಜಾಗೃತಿ ಕಾರ್ಯಕ್ರಮ ಹೀಗೆ ಎಲ್ಲ ಕ್ಷೇತ್ರದಲ್ಲಿರುವ ಧರ್ಮಸ್ಥಳ ತುಂಬಿದ ಕೊಡ.
ರಮೇಶ ರಾವ್ ರಕ್ತೇಶ್ವರಿ ದೇವಸ್ಥಾನದ ಧರ್ಮದರ್ಶಿ ಸಾಸ್ತಾನ ಪಾಂಡೇಶ್ವರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.