ಉಡುಪಿ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ವತಿಯಿಂದ ₹ 124.72 ಕೋಟಿ ವೆಚ್ಚದಲ್ಲಿ ಹೆಗ್ಗುಂಜೆ, ಬೆಳ್ಮಣ್, ಬೆಳಪು ಉಪ ವಿದ್ಯುತ್ ಕೇಂದ್ರ ಹಾಗೂ ಇತರೆ ಕಾಮಗಾರಿಗಳ ಅನಾವರಣ ಕಾರ್ಯಕ್ರಮವನ್ನು ಭಾನುವಾರ ಕುಂಜಿಬೆಟ್ಟು ಕರ್ನಾಟಕ ವಿದ್ಯುಚ್ಛಕ್ತಿ ನೌಕರರ ಸಭಾಭವನದಲ್ಲಿ ಶಾಸಕ ಕೆ.ರಘುಪತಿ ಭಟ್ ಉದ್ಘಾಟಿಸಿದರು.
ಬಳಿಕ ಮಾತನಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇಂಧನ ಕ್ಷೇತ್ರದಲ್ಲಿ ಸೋಲಾರ್ ವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡುತ್ತಿರುವ ಪರಿಣಾಮ ವಿದ್ಯುತ್ ಕೊರತೆ ನೀಗಿದ್ದು ಹೆಚ್ಚುವರಿ ವಿದ್ಯುತ್ ಉತ್ಪಾದನೆಯಾಗುತ್ತಿದೆ. ರಾಜ್ಯ ಇಂಧನ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸುತ್ತಿದೆ ಎಂದರು.
ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಮಾತನಾಡಿ, ವಿದ್ಯುತ್ ಉತ್ಪಾದನಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ರೈತರ ಭೂಮಿ ಸ್ವಾಧೀನ ಪಡಿಸಿಕೊಂಡರೆ ಭೂಮಿ ಕಳೆದುಕೊಂಡ ರೈತರಿಗೆ ಮಾರುಕಟ್ಟೆಯ ಬೆಲೆ ಆಧಾರಿಸಿ ಗರಿಷ್ಠ ಪರಿಹಾರ ಸಿಗಬೇಕು ಎಂದರು.
ಕಾಪು ಶಾಸಕ ಲಾಲಾಜಿ ಆರ್.ಮೆಂಡನ್, ಮೆಸ್ಕಾಂ ಮಂಗಳೂರು ವಿಭಾಗದ ವ್ಯವಸ್ಥಾಪಕ ನಿರ್ದೇಶಕ ಮಂಜಪ್ಪ, ಹಾಸನ ಪ್ರಸರಣ ವಲಯದ ಮುಖ್ಯ ಎಂಜಿನಿಯರ್ ಎಂಆರ್.ಶಾನುಭಾಗ್, ಉಡುಪಿ ವೃತ್ತ ಅಧೀಕ್ಷಕ ಎಂಜಿನಿಯರ್ ದಿನೇಶ್ ಉಪಾಧ್ಯಾಯ, ನಿಗಮದ ಕಾರ್ಯಪಾಲಕ ಎಂಜಿನಿಯರ್ ಗಂಗಾಧರ್, ಶ್ರೀನಿವಾಸ್ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.