ಬ್ರಹ್ಮಾವರ: ‘ಭಾರತದ ಪ್ರತಿಯೊಬ್ಬ ಪ್ರಜೆಯೂ ಶಿಕ್ಷಣ ಪಡೆಯಬೇಕು. ಈ ನಿಟ್ಟಿನಲ್ಲಿ ಎಲ್ಲ ರೋಟರಿ ಕ್ಲಬ್‌ಗಳು ಸಹಕರಿಸಬೇಕು’ ಎಂದು 3182 ರೋಟರಿ ಜಿಲ್ಲಾ ಗವರ್ನರ್ ದೇವಾನಂದ್ ಸದಸ್ಯರಿಗೆ ಕರೆ ನೀಡಿದರು.
ಹಂಗಾರಕಟ್ಟೆ ಸಾಸ್ತಾನ ರೋಟರಿ ಕ್ಲಬ್ ವತಿಯಿಂದ ವಲಯಮಟ್ಟದ ಮೂಲಭೂತ ಶಿಕ್ಷಣ ಮತ್ತು ಸಾಕ್ಷರತೆ ಎಂಬ ವಿಷಯದ ಬಗ್ಗೆ ಇಲ್ಲಿನ ಹೋಟೆಲ್ ಆಶ್ರಯ ಸಭಾಂಗಣದಲ್ಲಿ ನಡೆದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.
ರೋಟರಿ ಕ್ಲಬ್ ಅಧ್ಯಕ್ಷ ಅರವಿಂದ ಶರ್ಮ ಅಧ್ಯಕ್ಷತೆ ವಹಿಸಿದ್ದರು. 3182 ರೋಟರಿ ಜಿಲ್ಲೆಯ ಮೂಲಭೂತ ಶಿಕ್ಷಣ ಮತ್ತು ಸಾಕ್ಷರತೆಯ ಜಿಲ್ಲಾಧ್ಯಕ್ಷ ಸುರೇಶ್ ಕೋಣಂದೂರ್ ಮತ್ತು ಸಾಕ್ಷರತಾ ಅಭಿಯಾನದ ಜಿಲ್ಲಾಧ್ಯಕ್ಷ ಅಶೋಕ ಕುಮಾರ್ ಶೆಟ್ಟಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಜಿಲ್ಲೆಯ ವಿವಿಧ ಶಾಲೆಗಳಿಂದ ಆಯ್ಕೆಯಾದ 10 ಮಂದಿ ಶಿಕ್ಷಕರಿಗೆ ನ್ಯಾಷನಲ್ ಬಿಲ್ಡರ್ ಅವಾರ್ಡ್ ನೀಡಿ ಗೌರವಿಸಲಾಯಿತು.
ಇಂಟರ್‍ಯಾಕ್ಟ್ ಜಿಲ್ಲಾಧ್ಯಕ್ಷ ಬಿ.ಎಂ.ಭಟ್, ವಲಯ ತರಬೇತುದಾರ ಪದ್ಮನಾಭ ಕಾಂಚನ್, ವಲಯ ಕಾರ್ಯದರ್ಶಿ ರಾಮದೇವ ಕಾರಂತ್, ವಲಯ ಸಂಯೋಜಕ ರಾಜಾರಾಮ ಶೆಟ್ಟಿ, ವಲಯ ಸೇನಾನಿ ರಾಜಾರಾಮ ಐತಾಳ, ವಿಜಯ ಶೆಟ್ಟಿ, ಗಣೇಶ ಜಿ. ಇದ್ದರು. ವಲಯ 3ರ ಅಸಿಸ್ಟೆಂಟ್ ಗವರ್ನರ್ ಆಲ್ವಿನ್ ಕ್ವಾಡ್ರಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ಲಬ್ ಕಾರ್ಯದರ್ಶಿ ಕರುಣಾಕರ ಶೆಟ್ಟಿ ವಂದಿಸಿದರು. ನರೇಂದ್ರ ಕುಮಾರ್ ನಿರೂಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.