ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ಕರ್‌ ಫರ್ನಾಂಡಿಸ್‌ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಗಣ್ಯರು

Last Updated 14 ಸೆಪ್ಟೆಂಬರ್ 2021, 8:42 IST
ಅಕ್ಷರ ಗಾತ್ರ

ಉಡುಪಿ: ರಾಜ್ಯಸಭಾ ಸದಸ್ಯ ಹಾಗೂ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ಅವರ ಪಾರ್ಥಿವ ಶರೀರವನ್ನು ಮಂಗಳವಾರ ಬೆಳಿಗ್ಗೆ ಉಡುಪಿಯ ಶೋಕಮಾತಾ ಚರ್ಚ್‌ಗೆ ತರಲಾಯಿತು.

ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್,ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ವಿನಯ ಕುಮಾರ್ ಸೊರಕೆ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಚಂದ್ರ ಶೆಟ್ಟಿ, ಶಾಸಕ ಯು.ಟಿ.ಖಾದರ್, ಮುಖಂಡರಾದ ಮೊಯಿದ್ದೀನ್ ಭಾವ, ಜೆ.ಆರ್.ಲೊಬೊ, ಮಂಜುನಾಥ ಭಂಡಾರಿ ಸೇರಿದಂತೆ ಹಲವು ಗಣ್ಯರು ಚರ್ಚ್‌ಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು.

ಉಡುಪಿ ಧರ್ಮಪ್ರಾಂತ್ಯದ ಗುರುಗಳಾದ ಜೆರಾಲ್ಡ್ ಐಸಾಕ್ ಲೋಬೋ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಈ ಸಂದರ್ಭ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.

ಆಸ್ಕರ್ ಫರ್ನಾಂಡಿಸ್ ಕುಟುಂಬದ ಮೂಲ ಚರ್ಚ್ ಇದಾಗಿದೆ.

ಬಳಿಕ ಪಾರ್ಥಿವ ಶರೀರವನ್ನು ಬ್ರಹ್ಮಗಿರಿಯ ಆಸ್ಕರ್ ಅವರ ನಿವಾಸಕ್ಕೆ ತಂದು ಸಾರ್ವಜನಿಕ ದರ್ಶನಕ್ಕಿಡಲಾಗಿತ್ತು. ಇಲ್ಲಿಯೂ ಧರ್ಮಗುರುಗಳು ಪ್ರಾರ್ಥನೆ ಸಲ್ಲಿಸಿದರು. ಬಳಿಕ ಕಾಂಗ್ರೆಸ್ ಕಚೇರಿಗೆ ಕೊಂಡೊಯ್ದು ಅಂತಿಮ ದರ್ಶನಕ್ಕೆ ಇಡಲಾಯಿತು. ದಾರಿಯುದ್ದಕ್ಕೂ ಕಾಂಗ್ರೆಸ್ ಕಾರ್ಯಕರ್ತರು ಹೂವಿನ ಮಳೆಗರೆಯುವ ಮೂಲಕ ಅಗಲಿದ ನಾಯಕನಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಉಡುಪಿಯಲ್ಲಿ ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡೀಸ್ ಅವರ ಪಾರ್ಥೀವ ಶರೀರಕ್ಕೆ ಪುಷ್ಪನಮನ ಸಲ್ಲಿಸಿದರು
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಉಡುಪಿಯಲ್ಲಿ ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡೀಸ್ ಅವರ ಪಾರ್ಥೀವ ಶರೀರಕ್ಕೆ ಪುಷ್ಪನಮನ ಸಲ್ಲಿಸಿದರು

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT